(Indian-Bank:) ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ? ಅರ್ಹತೆ ಏನಿರಬೇಕು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆಯ ವಿವರ:
ಲೋಕಲ್ ಬ್ಯಾಂಕ್ ಆಫೀಸರ್ (ಸ್ಥಳೀಯ ಬ್ಯಾಂಕ್ ಅಧಿಕಾರಿ)
ಹುದ್ದೆಯ ಸಂಖ್ಯೆ:
300
- ತಮಿಳುನಾಡು /ಪುಧುಚೇರಿ: 160
- ಕರ್ನಾಟಕ: 35
- ಆಂಧ್ರ ಪ್ರದೇಶ ಮತ್ತು ತೆಲಂಗಾಣ: 50
- ಮಹಾರಾಷ್ಟ್ರ: 40
- ಗುಜರಾತ್: 15ಅರ್ಹತೆ ಏನಿರಬೇಕು?;
- ಯಾವುದೇ ಅಂಗೀಕೃತ ವಿಶ್ವವಿದ್ಯಾಲಯಗಳು ಅಥವಾ ಸಂಸ್ಥೆಗಳಿಂದ ಪದವಿ ಪಾಸ್ ಮಾಡಿರಬೇಕು.
- ಆಯಾ ರಾಜ್ಯದ ಅಧಿಕೃತ ಭಾಷೆ ಮಾತನಾಡಲು, ಓದಲು, ಬರೆಯಲು ಬರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿತ ಕೊನೆ ದಿನಾಂಕಕ್ಕೆ ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ದಾಟಿರಬಾರದು. ಇತರೆ ಹಿಂದುಳಿದ ಕೆಟಗರಿ ಅಭ್ಯರ್ಥಿಗಳಿಗೆ 3 ವರ್ಷ ವಯಸ್ಸಿನ ಸಡಿಲಿಕೆ ಇದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಇದೆ.ವೇತನ:
48,480-85,920ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:
13-08-2024ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
02-09-2024ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://ibpsonline.ibps.in/iblbojul24/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.