ಈ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ  ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ(Anganwadi job application) ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಯಾವೆಲ್ಲ ಜಿಲ್ಲೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸುವ ವಿಧಾನ? ಅಂಗನವಾಡಿ ಕಾರ್ಯಕರ್ತೆ  ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು? ಆಯ್ಕೆ ವಿಧಾನ ಹೇಗಿರುತ್ತದೆ ಎನ್ನುವ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.

ಪ್ರತಿ 2-3 ತಿಂಗಳಿಗೆ ಒಮ್ಮೆ ಈ ಹುದ್ದೆಗಳನ್ನು ರಾಜ್ಯಾದ್ಯಂತ ಭರ್ತಿ ಮಾಡಿಕೊಳ್ಳಲಾಗುತ್ತಿದ್ದು ಈ ಹುದ್ದೆಯಲ್ಲಿ ಕೆಲಸ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Advertisement

Anganwadi job application last date-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 9 ಸೆಪ್ಟೆಂಬರ್ 2024 ಕೊನೆಯ ದಿನಾಂಕವಾಗಿದೆ.

anganwadi worker eligibility- ಸಲ್ಲಿಸಲು ಅರ್ಹತೆಗಳು:
ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

anganwadi centre job age limit- ಅರ್ಜಿ ಸಲ್ಲಿಸಲು ಇರಬೇಕಾದ ವಯೋಮಿತಿ:
ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 19-35 ವರ್ಷ ವಯೋಮಿತಿಯೊಳಗಿನ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ಯ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದು ಹಾಗೂ ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

anganwadi worker qualification- ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ವಿದ್ಯಾರ್ಹತೆ:-

1) ಕನಿಷ್ಠ P.U.C. ತೇರ್ಗಡೆ ಹೊಂದಿರಬೇಕು. S.S.L.C.ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
2) ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ಸಂದರ್ಭದಲ್ಲಿ “ಸರ್ಕಾರದ ಅಂಗೀಕೃತ ಸಂಸ್ಥೆಗಳಿಂದ D.S.E.R.T.ಯಿಂದ ECCE ಡಿಪ್ಲೊಮಾ ಕೋರ್ಸ್, JOC F N.T.T. ಕೋರ್ಸ್‌ಗಳನ್ನು ಹಾಗೂ ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಡಿಪ್ಲೊಮಾ ನ್ಯೂಟ್ರಿಷಿಯನ್, ಹೋಂ ಸೈನ್ಸ್ ಸರ್ಟಿಫಿಕೇಟ್ ಕೋರ್ಸ್, ಒಂದು ವರ್ಷದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿದವರಿಗೆ ಮೊದಲ ಆದ್ಯತೆ ನೀಡುವುದು ಹಾಗೂ ಸದರಿಯವರಿಗೆ ಬೋನಸ್ +5 ಅಂಕಗಳನ್ನು ನೀಡುವುದು.

anganwadi helper qualification- ಅಂಗನವಾಡಿ ಸಹಾಯಕಿ ವಿದ್ಯಾರ್ಹತೆ:-
ಹುದ್ದೆಗೆ ಕನಿಷ್ಟ ವಿದ್ಯಾರ್ಹತೆ SSLC ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣವಾಗಿರಬೇಕು.

anganwadi center job-ಪ್ರಸ್ತುತ ಯಾವೆಲ್ಲ ಜಿಲ್ಲೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ?

1) ದಾವಣಗೆರೆ
2) ವಿಜಯನಗರ
3) ಯಾದಗಿರಿ
4) ಶಿವಮೊಗ್ಗ
5) ಹಾಸನ
6) ಚಿತ್ರದುರ್ಗ
7) ಬೆಳಗಾವಿ

documents for anganwadi worker job-ಆನ್ ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು:-

1) ಅರ್ಜಿ ನಿಗದಿತ ನಮೂನೆಯಲ್ಲಿ (ಆನ್ ಲೈನ್)
2) ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ S.S.L.C.ಅಂಕಪಟ್ಟಿ
3) ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
4) ತಹಶೀಲ್ದಾರರು/ಉಪ ತಹಶೀಲ್ದಾರರಿಂದ ಪಡೆದ ಮೂರು (3) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ.
5) ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
6) ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ವೇತನದ ದೃಢಿಕರಣವನ್ನು ಪರಿಗಣಿಸುವಂತಿಲ್ಲ)
7) ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ)
8) ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು)
9) ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಎಂಬುದರ ಬಗ್ಗೆ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.

10) ಇಲಾಖೆಯ ಸುಧಾರಣಾ ಸಂಸ್ಥೆ /ರಾಜ್ಯ ಮಹಿಳಾ ನಿಲಯಗಳ ನಿವಾಸಿಗಳು ಕನಿಷ್ಟ 3 ವರ್ಷ ಸಂಸ್ಥೆಯಲ್ಲಿರಬೇಕು. ಹಾಗೂ ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ಪಡೆದ ನಿವಾಸಿ ಪ್ರಮಾಣ ಪತ್ರ
11) ಯೋಜನಾ ನಿರಾಶ್ರಿತರ ಬಗ್ಗೆ, ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ
12) ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ/ರೇಷನ್ ಕಾರ್ಡ್/ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದ ದೃಢೀಕರಣ ಪತ್ರ

Anganwadi online application: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗೆ ಕರ್ನಾಟಕ ಒನ್ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ.

Step-1: ಮೊದಲಿಗೆ ಈ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಭೇಟಿ ಮಾಡಬೇಕು.

Step-2: ನಂತರ “Submit Application for the post of Anganawadi Worker/Mini Anganawadi Workers/Anganawadi Helperಅಂಗನವಾಡಿ ಕಾರ್ಯಕರ್ತೆ/ಮಿನಿ ಅಂಗನವಾಡಿ ಕಾರ್ಯಕರ್ತೆಯರು/ಅಂಗನವಾಡಿ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸಿ” ಆಯ್ಕೆಯ ಮೇಲೆ ಕ್ಲಿಕ್ ಮಾಡಿಕೊಳ್ಳಿ ಇದಾದ ಬಳಿಕ ಈ ಪೇಜ್ ನಲ್ಲಿ “Select District/ಜಿಲ್ಲೆ” ಆಯ್ಕೆಯ ಅಲ್ಲಿ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಿ.
Step-3: ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡು ಕೆಳಗೆಡೆ “Select project/ಪ್ರಾಜೆಕ್ಟ್” ಆಯ್ಕೆಯನ್ನು ಮಾಡಿಕೊಂಡು ಮುಂದುವರೆಯಬೇಕು.
Step-4: ಈ ಪೇಜ್ ನಲ್ಲಿ ಕಾಣುವ ಎಲ್ಲಾ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿ “Back” ಬಟನ್ ಮೇಲೆ ಕ್ಲಿಕ್ ಮಾಡಿ “Upload Documents/ಡಾಕ್ಯುಮೆಂಟ್‌ಗಳನ್ನು ಅಪ್‌ಲೋಡ್ ಮಾಡಿ” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ನಿಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Print Application/ಅರ್ಜಿ ಮುದ್ರಿಸಲು” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್: Apply Now

ನೇಮಕಾತಿ ಕುರಿತು ಅಧಿಕೃತ ಮಾರ್ಗಸೂಚಿ: Download Now

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

vijayaprabha news google news

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement
ನವರಾತ್ರಿಯಲ್ಲಿ ಪೂಜಿಸಲ್ಪಡುವ ದುರ್ಗಾದೇವಿಯ ಒಂಭತ್ತು ಅವತಾರಗಳು