(DC Office) ಯಾದಗಿರಿಯ ಡಿಸಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆಯ ವಿವರ:
ಡಿಸ್ಟ್ರಿಕ್ಟ್ ಡಿಸಾಸ್ಟರ್ ಪ್ರೊಫೆಶನಲ್
ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸೈನ್ಸ್/ಸೋಷಿಯಲ್ ಸೈನ್ಸ್/ ರೂರಲ್ ಡೆವಲಪ್‌ಮೆಂಟ್/ ಎನ್ವಿರಾನ್‌ಮೆಂಟ್ ಸೈನ್ಸ್/ ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಅಭ್ಯರ್ಥಿಗಳು ಡಿಸಾಸ್ಟರ್ ಮ್ಯಾನೇಜ್‌ಮೆಂಟ್ ಕ್ಷೇತ್ರದಲ್ಲಿ ಕನಿಷ್ಠ 3-5 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು. ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಪಡೆದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ವೇತನ:
48,400
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳ ಅರ್ಜಿಗಳನ್ನು ಸ್ಕ್ರೀನಿಂಗ್ ಮಾಡಲಾಗುತ್ತದೆ. ನಂತರ ಅಭ್ಯರ್ಥಿಗಳ ಹೆಸರನ್ನು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಬಳಿಕ ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಶೈಕ್ಷಣಿಕ ದಾಖಲೆಗಳು, ಅನುಭವ ಪ್ರಮಾಣ ಪತ್ರ, ಇತ್ತೀಚಿನ ರೆಸ್ಯೂಮ್/ಸಿವಿಯೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಡೆಪ್ಯುಟಿ ಕಮಿಷನರ್ (ಡಿಸಾಸ್ಟರ್ ಮ್ಯಾನೇಜ್ ಮೆಂಟ್ ಸೆಲ್)
ಡೆಪ್ಯುಟಿ ಕಮಿಷನರ್ ಕಚೇರಿ
ಯಾದಗಿರಿ ಜಿಲ್ಲೆ
ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
06/08/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
20/08/2024
ಸೂಚನೆ: ಡಿಸ್ಟ್ರಿಕ್ಟ್ ಡಿಸಾಸ್ಟರ್ ಪ್ರೊಫೆಶನಲ್ ಹುದ್ದೆಗೆ ಅಭ್ಯರ್ಥಿಯನ್ನು 11 ತಿಂಗಳ ಅವಧಿಗೆ ನೇಮಿಸಿಕೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9632323786 ಅಥವಾ 08473-253700 ಗೆ ಸಂಪರ್ಕಿಸಿ.