ಸಂಪುಟದಿಂದ‌ ಜಮೀರ್‌ ಖಾನ್ ಅವರನ್ನು ಕಿತ್ತೊಗೆಯಲಿ: ಸಿಎಂಗೆ ಪ್ರಹ್ಲಾದ್ ಜೋಶಿ ಆಗ್ರಹ

ಹುಬ್ಬಳ್ಳಿ: ರಾಜ್ಯದಲ್ಲಿ ವಕ್ಫ್ ಮೂಲಕ ಕೋಮು-ದ್ವೇಷ ಹರಡುತ್ತಿರುವ, ಇಸ್ಲಾಮಿಕರಣಕ್ಕೆ ಮುಂದಾಗಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಮುಖ್ಯಮಂತ್ರಿಯವರು ಸಚಿವ ಸಂಪುಟದಿಂದ ಕಿತ್ತೊಗೆಯಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಒತ್ತಾಯಿಸಿದ್ದಾರೆ. ನಗರದಲ್ಲಿ‌ ಸುದ್ದಿಗಾರರೊಂದಿಗೆ…

ಹುಬ್ಬಳ್ಳಿ: ರಾಜ್ಯದಲ್ಲಿ ವಕ್ಫ್ ಮೂಲಕ ಕೋಮು-ದ್ವೇಷ ಹರಡುತ್ತಿರುವ, ಇಸ್ಲಾಮಿಕರಣಕ್ಕೆ ಮುಂದಾಗಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಮುಖ್ಯಮಂತ್ರಿಯವರು ಸಚಿವ ಸಂಪುಟದಿಂದ ಕಿತ್ತೊಗೆಯಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಒತ್ತಾಯಿಸಿದ್ದಾರೆ.

ನಗರದಲ್ಲಿ‌ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನ ಡೋಂಗಿ ಜಾತ್ಯತೀತತೆ ಮತ್ತು ಮುಸ್ಲಿಮರ ತುಷ್ಟೀಕರಣದ ನೀತಿಯಿಂದಾಗಿ ದೇವಸ್ಥಾನಗಳ‌ ಒಂದು ಇಂಚು ಜಾಗವೂ ಹೆಚ್ಚಾಗಿಲ್ಲ. ಆದರೆ, ಎಲ್ಲ ಪ್ರಮುಖ ಮತ್ತು ಹೆಚ್ಚು ಆದಾಯ ಇರುವ ದೇವಸ್ಥಾನಗಳನ್ನು ಸರ್ಕಾರ ತನ್ನ ಹಿಡಿತದಲ್ಲಿ ಇಟ್ಟುಕೊಂಡಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಸರ್ಕಾರ ಇದ್ದಾಗಲೂ ರೈತರಿಗೆ ನೋಟಿಸ್ ನೀಡಲಾಗಿತ್ತು ಎಂದು ಕಾಂಗ್ರೆಸ್‌ನವರು ಆರೋಪಿಸುತ್ತಿದ್ದಾರೆ. ಆ ಸಮಯದಲ್ಲಿ ರೈತರಿಗೆ ನೋಟಿಸ್ ನೀಡಿದ್ದರೆ ಅದು ತಪ್ಪು. ಆಗ ಯಾರೂ ನಮ್ಮ ಗಮನಕ್ಕೆ ತಂದಿರಲಿಲ್ಲ. ನಮ್ಮ ಸರ್ಕಾರ ಇದ್ದುದರಿಂದ ವಕ್ಫ್ ಮಂಡಳಿಯವರು ಗೌಪ್ಯವಾಗಿ ನೋಟಿಸ್ ನೀಡಿದ್ದರು. ಆಗ ನಮ್ಮ‌ ಗಮನಕ್ಕೆ ಬಂದಿದ್ದರೆ ಮಂಡಳಿಯವರಿಗೆ ಆಗಲೇ ಎಚ್ಚರಿಕೆ ನೀಡಿ, ನೋಟಿಸ್ ಹಿಂಪಡೆಯಲು ಸೂಚನೆ ನೀಡುತ್ತಿದ್ದೆವು. ಈಗ ರೈತರು ನಮ್ಮ ಗಮನಕ್ಕೆ ತಂದಿದ್ದರಿಂದ ಹೋರಾಟ ಮಾಡಲಾಗುತ್ತಿದೆ. ವಕ್ಫ್ ಆಸ್ತಿ ವಿವಾದ ಈಗಲೂ ಬೆಳಕಿಗೆ ಬರುತ್ತಿರಲಿಲ್ಲ. ಕೆಲವು ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ಬಂದಿದ್ದರಿಂದ, ಉಳಿದವರು ಸಬ್ ರಿಜಿಸ್ಟ್ರಾರ್ ಕಚೇರಿಗೆ ಹೋಗಿ ತಮ್ಮ ದಾಖಲೆಗಳನ್ನು ಪರಿಶೀಲಿಸಿದಾಗ ಇದು ಬೆಳಕಿಗೆ ಬಂದಿದೆ ಎಂದರು.

Vijayaprabha Mobile App free

ವಕ್ಫ್‌ ಅದಾಲತ್‌ ನಿಲ್ಲಿಸಿ:

ರೈತರಿಗೆ ನೀಡಿದ್ದ ನೋಟಿಸ್ ಹಿಂಪಡೆಯಲಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ, ರೈತರ ಪಹಣಿಯಲ್ಲಿ ಈಗಲೂ ವಕ್ಫ್ ಆಸ್ತಿ ಎಂದು ನಮೂದಾಗಿದೆ. ಸ್ವಾತಂತ್ರ್ಯ ಪೂರ್ವದಿಂದಲೂ ರೈತರು ಜಮೀನು ಹೊಂದಿದ್ದಾರೆ. ಇತ್ತೀಚಿನ ವರ್ಷಗಳ ಪಹಣಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿರುವುದನ್ನು ಕೂಡಲೇ ತೆಗೆದು ಹಾಕಬೇಕು. ಪ್ರತಿ ಜಿಲ್ಲೆಗಳಿಗೆ ಹೋಗಿ ವಕ್ಫ್ ಮಂಡಳಿಯವರು ವಕ್ಫ್ ಅದಾಲತ್ ನಡೆಸುತ್ತಿದ್ದು ಕೂಡಲೇ ಅದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.