ದಾವಣಗೆರೆ : ಬಿಜೆಪಿಯ ಮಾಜಿ ಸಚಿವ ಬಿಸಿ ಪಾಟೀಲ್ ಅಳಿಯ ಕೆ.ಜಿ ಪ್ರತಾಪ್ ಕುಮಾರ್ (43) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಿಕೇರಿ ಎಂಬಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ದಾವಣಗೆರೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ರಸ್ತೆ ಬದಿಯಲ್ಲಿ ಕಾರು ನಿಂತಿರುವುದನ್ನು ಸ್ಥಳೀಯರು ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುತ್ತಾರೆ. ಈ ವೇಳೆ ಪೊಲೀಸರು ಆಗಮಿಸಿ ಕೂಡಲೇ ಕೆ.ಜಿ ಪ್ರತಾಪ್ ಕುಮಾರ್ ಅವರನ್ನು ಸ್ಥಳೀಯ ಹೊನ್ನಾಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡುತ್ತಾರೆ ಆದರೆ ಅಲ್ಲಿಂದ ನಂತರ ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ದಾಖಲಿಸುತ್ತಾರೆ.
ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಪ್ರತಾಪ್ ಕುಮಾರ್ ಸಾವನ್ನಪ್ಪಿದ್ದಾರೆ. ಎಂದು ಹೇಳಲಾಗುತ್ತಿದೆ.ಮೃತ ಪ್ರತಾಪ್ ಕುಮಾರ್ ಅವರು ಬಿಸಿ ಪಾಟೀಲ್ ಅವರ ಮೊದಲನೇ ಮಗಳ ಪತಿಯಾಗಿದ್ದು,ಸದ್ಯ ಆತ್ಮಹತ್ಯೆಗೆ ಏನು ಕಾರಣ ಎನ್ನುವುದು ಪೊಲೀಸರು ತನಿಖೆ ನಡೆಸುತ್ತಿದ್ದು, ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.