ಸಿಖ್ಖರ ಅವಹೇಳನ ಆರೋಪ: ನಟಿ ಕಂಗನಾಗೆ ನೋಟಿಸ್

ಚಂಡೀಗಢ:ಸ್ಥಳೀಯ ನ್ಯಾಯಾಲಯವು ಮಂಡಿ ಸಂಸದೆ ಮತ್ತು ಬಾಲಿವುಡ್ ನಟಿ-ನಿರ್ಮಾಪಕಿ ಕಂಗನಾ ರನೌತ್ ಅವರಿಗೆ ಬುಧವಾರ ನೋಟಿಸ್ ಜಾರಿ ಮಾಡಿದ್ದು, ಡಿಸೆಂಬರ್ 5 ರಂದು ತನ್ನ ವಿವಾದಾತ್ಮಕ ಚಲನಚಿತ್ರ ತುರ್ತು ಪರಿಸ್ಥಿತಿ ಕುರಿತು ವಕೀಲರೊಬ್ಬರು ಸಲ್ಲಿಸಿದ…

ಚಂಡೀಗಢ:ಸ್ಥಳೀಯ ನ್ಯಾಯಾಲಯವು ಮಂಡಿ ಸಂಸದೆ ಮತ್ತು ಬಾಲಿವುಡ್ ನಟಿ-ನಿರ್ಮಾಪಕಿ ಕಂಗನಾ ರನೌತ್ ಅವರಿಗೆ ಬುಧವಾರ ನೋಟಿಸ್ ಜಾರಿ ಮಾಡಿದ್ದು, ಡಿಸೆಂಬರ್ 5 ರಂದು ತನ್ನ ವಿವಾದಾತ್ಮಕ ಚಲನಚಿತ್ರ ತುರ್ತು ಪರಿಸ್ಥಿತಿ ಕುರಿತು ವಕೀಲರೊಬ್ಬರು ಸಲ್ಲಿಸಿದ ಅರ್ಜಿಯ ವಿಚಾರಣೆಗೆ ಹಾಜರಾಗುವಂತೆ ಹೇಳಿದ್ದಾರೆ.

ವಿವಾದಾತ್ಮಕ ಚಿತ್ರ ʻಎಮರ್ಜೆನ್ಸಿʼಗೆ ಸಂಬಂಧಿಸಿದಂತೆ ಕಂಗನಾ ಅವರಿಗೆ ಚಂಡೀಗಢದ ಜಿಲ್ಲಾ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ. ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ವಕೀಲ ರವೀಂದರ್ ಸಿಂಗ್ ಬಸ್ಸಿ ಅವರು, ಈ ಚಿತ್ರದಲ್ಲಿ ಸಿಖ್ಖರ ಪ್ರತಿಷ್ಠೆಯನ್ನು ಹಾಳು ಮಾಡಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಸಿಖ್ಖರ ಚಿತ್ರಣವನ್ನು ತಪ್ಪಾಗಿ ಪ್ರದರ್ಶಿಸಲಾಗಿದೆ. ಜೊತೆಗೆ ಸಿಖ್‌ ಸಮುದಾಯದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿದೆ. ಹಾಗಾಗಿ ಕಂಗನಾ ವಿರುದ್ಧ ಕೇಸ್‌ ದಾಖಲಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ. ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಕೋರ್ಟ್‌ ಕಂಗನಾ ಅವರಿಗೆ ನೋಟಿಸ್‌ ನೀಡಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಡಿಸೆಂಬರ್‌ 5ಕ್ಕೆ ಮುಂದೂಡಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.