ಕಾರವಾರ: ಬೆಳಗಿನ ಜಾವ ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ದಂಪತಿಯ ಮೇಲೆ ಹಲ್ಲೆ ಮಾಡಿದ ಘಟನೆ ತಾಲೂಕಿನ ಹಣಕೋಣ ಗ್ರಾಮದಲ್ಲಿ ಭಾನುವಾರ ಸೆ.22 ನಡೆದಿದೆ.
ಪುಣೆಯಲ್ಲಿ ಕೈಗಾರಿಕೆ ಸ್ಥಾಪಿಸಿರುವ ಉದ್ಯಮಿ ವಿನಾಯಕ ನಾಯ್ಕ (56) ಮನೆಯ ಕೋಣೆಯೊಂದರಲ್ಲಿ ಹತ್ಯೆಯಾಗಿದ್ದಾರೆ. ಅವರ ಪತ್ನಿ ವೈಶಾಲಿ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಅವರನ್ನು ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿನಾಯಕ ನಾಯ್ಕ ಹಾಗೂ ವೈಶಾಲಿ ದಂಪತಿ ಹಣಕೋಣ ಮೂಲದವರಾಗಿದ್ದು, ಪುಣೆ ನಗರದಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಪುಣೆಯಿಂದ ಸಾತೇರಿ ದೇವಿ ಜಾತ್ರೆಗೆ ಬಂದಿದ್ದ ಇವರು ಹಣಕೋಣದಲ್ಲಿನ ಮನೆಯಲ್ಲಿ ವಾಸವಾಗಿದ್ದರು. ಆದರೆ ಈ ಕೊಲೆ ವೈಷಮ್ಯದ ನಡೆದ ಕೊಲೆಯೋ ಅಥವಾ ದರೋಡೆಯಿಮದಲೋ ತನಿಖೆಯಿಂದ ತಿಳಿದು ಬರಬೇಕಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.