ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು, ಮಳೆಗೆ ಶಿರಾಡಿ ಸಂಪಾಜೆ ಘಾಟಿಯಲ್ಲಿ ಭೂ ಕುಸಿತವಾಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ.
ಭಾರೀ ಮಳೆಗೆ ಶಿರಾಡಿ ಸಂಪಾಜೆ ಘಾಟಿಯಲ್ಲಿ ಭೂಕುಸಿತವಾಗಿದ್ದು, ಮಂಗಳೂರು ಕೆಎಸ್‌ಆರ್‌ಟಿಸಿ ವಿಭಾಗದಿಂದ ತೆರಳುವ ಶೇ.50ರಷ್ಟು ಪ್ರೀಮಿಯಂ ಬಸ್ ಸಂಚಾರ ರದ್ದುಗೊಂಡಿದೆ. ನಾನ್ ಎಸಿ ಸ್ಲಿಪರ್, ರಾಜಹಂಸ, ಸಾಮಾನ್ಯ ಸಾರಿಗೆ ಬಸ್‌ಗಳು ಚಾರ್ಮಾಡಿ ಮೂಲಕ ಸಂಚರಿಸುತ್ತದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನ ಮನೆಯಿಂದ ಹೊರ ಬರಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿದೆ. ಹಲವಡೆ ಗುಡ್ಡ ಕುಸಿದ ಪರಿಣಾಮ ಸಂಚಾರ ಸ್ಥಗಿತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment