ಜಮೀನಿನ ಕುರಿತು ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

(agricultural land-:) ರೈತರಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಹಲವು ಯೋಜನೆಯನ್ನು ಜಾರಿಗೊಳಿಸಿದೆ. ಇದರಿಂದ ರೈತರಿಗೆ ಸಹಾಯವಾಗಿದ್ದು, ಇದೀಗ ರಾಜ್ಯ ಸರ್ಕಾರದಿಂದ ರೈತರಿಗೆ ಮಹತ್ವದ ಆದೇಶ ಹೊರಡಸಿದೆ. ಏನದು ಆದೇಶ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ರೈತರು ತಮ್ಮ ತಮ್ಮ ಜಮಿನಿಗಳಿಗೆ ಹೋಗಲು ದಾರಿಯ ಕುರಿತು ರಾಜ್ಯ ಸರ್ಕಾರದ ಕೆಲವು ಸೂಚನೆಯನ್ನು ನೀಡಿದೆ. ಆ ಸೂಚನೆಯಲ್ಲಿ ಏನಿದೆ ಎಂದು ಈ ಕೆಳಗೆ ನೀಡಲಾಗಿದೆ.

ರೈತರು ತಮ್ಮ ಜಮೀನಿಗೆ ತೆರಳಲು ಅಥವಾ ಕೃಷಿ ಸಲಕರಣೆಗಳನ್ನು ಸಾಗಿಸಲು ರೈತರುಗಳಿಗೆ ತೊಂದರೆಯಾಗುತ್ತಿದ್ದು, ಈ ಕುರಿತು ಹಲವು ದೂರುಗಳು ಕೂಡ ದಾಖಲಾಗಿದೆ. ಅಲ್ಲದೆ ಗ್ರಾಮ ನಕಾಶೆ ದಾರಿಗಳಲ್ಲಿ ಬಳಕೆದಾರ ರೈತರು ತಿರುಗಾಡಲು ಅವಕಾಶವಿದ್ದರೂ ಕೆಲವು ಭೂಮಾಲೀಕರು ಬಳಕೆದಾರ ರೈತರುಗಳಿಗೆ ತಿರುಗಾಡಲು ಅಡ್ಡಿಪಡಿಸುತ್ತಿರುವುದು ಅಥವಾ ಅಂತಹ ಜಾಗಗಳನ್ನು ಮುಚ್ಚಿರುವುದು ಹಾಗೂ ರೈತರು ಬಹುಕಾಲದಿಂದಲೂ ಬಳಸುವ ದಾರಿಗಳಲ್ಲಿ ತಿರುಗಾಡಲು ಕೆಲವು ರೈತರ ಮಧ್ಯದ ವೈಯಕ್ತಿಕ ದ್ವೇಷ/ಅಸೂಯೆಗಳು ಮತ್ತು ಹೊಂದಾಣಿಕೆಯ ಕೊರತೆಯಿಂದಾಗಿ ಬಳಕೆದಾರ ರೈತರ ತೊಂದರೆಗಳಿದೆ.

Advertisement

1966ರ ನಿಯಮ 59 ರಲ್ಲಿ ದಾರಿಯ ಹಕ್ಕುಗಳು ಮತ್ತು ಇತರೆ ಅನುಭೋಗದ ಹಕ್ಕುಗಳ ಬಗ್ಗೆ ತಿಳಿಸಲಾಗಿದ್ದು, ಸಂಬಂಧಪಟ್ಟ ಜಮೀನುಗಳ ಭಾಗಿದಾರರು ಒಪ್ಪಿರುವಂತಹ ಸಂದರ್ಭದಲ್ಲಿ ಹಕ್ಕುಗಳ ದಾಖಲೆ ರಿಜಿಸ್ಟರ್‌ ನಲ್ಲಿ ನಮೂದು ಮಾಡಲು ಅವಕಾಶವಿದೆ.

The Indian Easement Act, 1882 03 ಅನುಭವದಲ್ಲಿರುವವರು ಅವರ ಭೂಮಿಯನ್ನು ಪ್ರವೇಶಿಸುವ ಹಕ್ಕು ಮತ್ತು ವಹಿವಾಟಿನ ಹಕ್ಕನ್ನು ಹೊಂದಿದ್ದು ಇದಕ್ಕೆ ಬಾಜುದಾರರಿಂದ ಯಾವುದೇ ಹಸ್ತಕ್ಷೇಪಕ್ಕೆ ಅಥವಾ ಸದರಿ ಹಕ್ಕನ್ನು ಕ್ಷೀಣಿಸುವುದಕ್ಕೆ ಸಾಧ್ಯವಿರುವುದಿಲ್ಲ. ಅಲ್ಲದೆ Code of Criminal Procedure, 19730 00 147 ರನ್ನಯ ಭೂಮಿ ಮತ್ತು ನೀರಿನ ಹಕ್ಕಿನ ಉಪಯೋಗದ ಕುರಿತು ಸ್ಥಳೀಯ ಶಾಂತಿಗೆ ಭಂಗ ಉಂಟಾಗುವ ಸಂದರ್ಭಗಳಲ್ಲಿ ಅದನ್ನು ನಿವಾರಿಸಲು ಕಾನೂನು ರೀತ್ಯಾ ತಹಶೀಲ್ದಾರ್ ರವರು ತಾಲೂಕು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಆಗಿ ಕ್ರಮವಹಿಸುವ ಅಧಿಕಾರ ಹೊಂದಿರುತ್ತಾರೆ.

ಅದರಂತೆ, ತಾಲೂಕಿನ ತಹಶೀಲ್ದಾರ್‌ ಗಳು ನಕಾಶೆ ಕಂಡ ಕಾಲುದಾರಿ, ಬಂಡಿದಾರಿ ಅಥವಾ ರಸ್ತೆಗಳಲ್ಲಿ ಕೃಷಿ ಬಳಕೆದಾರರು ತಿರುಗಾಡಲು ಅವಕಾಶ ನೀಡದೆ ಅಡ್ಡಿಪಡಿಸುವಂತಹ/ಬಳಸಲು ಮುಚ್ಚಿರುವಂತಹ ಸಂದರ್ಭದಲ್ಲಿ ಅವುಗಳನ್ನು ತೆರವುಗೊಳಿಸಿ ತಿರುಗಾಡಲು ದಾರಿಗಳನ್ನು ಸುಗಮಗೊಳಿಸಲು ಕ್ರಮವಹಿಸುವಂತೆ ಸೂಚಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

vijayaprabha news google news

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement
ನವರಾತ್ರಿಯಲ್ಲಿ ಪೂಜಿಸಲ್ಪಡುವ ದುರ್ಗಾದೇವಿಯ ಒಂಭತ್ತು ಅವತಾರಗಳು