CM Resignation: ‘ಚಳಿಗಾಲದ ಅಧಿವೇಶನಕ್ಕೂ ಮುನ್ನ ಸಿದ್ದರಾಮಯ್ಯರಿಂದ ರಾಜೀನಾಮೆ’

ಬೆಳಗಾವಿ: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೂ ಮುನ್ನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂದು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿಜಯೇಂದ್ರ, ಮುಖ್ಯಮಂತ್ರಿ ಸ್ಥಾನದ…

CM ಸಿದ್ದರಾಮಯ್ಯ

ಬೆಳಗಾವಿ: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೂ ಮುನ್ನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂದು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿಜಯೇಂದ್ರ, ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಪಕ್ಷದ ವಿವಿಧ ಆಕಾಂಕ್ಷಿಗಳತ್ತ ಬೊಟ್ಟು ಮಾಡಿದರು. ಸಿದ್ದರಾಮಯ್ಯ ಪೂರ್ಣಾವಧಿ ಪೂರೈಸಲಿದ್ದಾರೆ ಎಂದು ಸಚಿವರು ಹೇಳುತ್ತಿದ್ದರೂ, ಈಗಾಗಲೇ ಹಲವು ನಾಯಕರು ಸಿಎಂ ಗಾದಿಯ ಮೇಲೆ ಕಣ್ಣಿಟ್ಟು ಕಾಯುತ್ತಿದ್ದಾರೆ ಎಂದು ಟೀಕಿಸಿದರು.

ವಾಲ್ಮೀಕಿ ನಿಗಮ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಗಳ ನಂತರ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕೋಮಾಕ್ಕೆ ಜಾರಿದೆ ಎಂದು ಹೇಳಿದರು. ನಮ್ಮ ಹೋರಾಟದ ಪರಿಣಾಮವಾಗಿ ನಿವೇಶನಗಳನ್ನು ಮೂಡಾಕ್ಕೆ ವಾಪಸ್ಸು ಮಾಡಿ ಮುಖ್ಯಮಂತ್ರಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಇದು ಈಗ ಅವರು ರಾಜೀನಾಮೆ ನೀಡುವ ಸ್ಥಿತಿಗೆ ತಂದಿರಿಸಿದೆ ಎಂದರು.

Vijayaprabha Mobile App free

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.