ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ( ಮುಡಾ )ದಿಂದ ನಿವೇಶನ ಹಂಚಿಕೆ ಆರೋಪದಡಿ ಪತ್ನಿಗೆ ಪರ್ಯಾಯ ನಿವೇಶನ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಅಕ್ರಮ ಆಸ್ತಿಗಳ ಬಗ್ಗೆ ತನಿಖೆ ಚುರುಕುಗೊಳಿಸಿರುವ ಕರ್ನಾಟಕ ಲೋಕಾಯುಕ್ತ, ನಾಲ್ಕನೇ ಆರೋಪಿ ದೇವರಾಜು ಅವರಿಗೆ ಸಮನ್ಸ್ ಜಾರಿ ಮಾಡಿದೆ.
ಕೆಸರೆ ಸರ್ವೆ ನಂ.464ರಲ್ಲಿನ ವಿವಾದಿತ ಭೂಮಿಗೆ ಸಂಬಂಧಿಸಿದ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಐಒ ಎದುರು ಹಾಜರಾಗುವಂತೆ 70 ವರ್ಷದ ಜವರ ಅವರ ಪುತ್ರ ಹಾಗೂ ಬೆಂಗಳೂರು ನಿವಾಸಿ ದೇವರಾಜು ಅವರಿಗೆ ಸಮನ್ಸ್ ನೀಡಲಾಗಿದೆ. ಸಮನ್ಸ್‌ನಲ್ಲಿ, ಅಕ್ಟೋಬರ್ 10 ರಂದು ತನಿಖಾಧಿಕಾರಿ (ಐಒ) ಮುಂದೆ ಹಾಜರಾಗಲು ತಿಳಿಸಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರಿನ ಮೇರೆಗೆ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ, ಅವರ ಸೋದರ ಮಾವರಾದ ಬಿ.ಎಂ.ಮಲ್ಲಿಕಾರ್ಜುನ ಸ್ವಾಮಿ, ದೇವರಾಜು ಮತ್ತು ಇತರರ ವಿರುದ್ಧ ಕರ್ನಾಟಕ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.