ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸೆ.2ರವರೆಗೆ ಭಾರೀ ಮಳೆ ಸಾಧ್ಯತೆ- ಹವಾಮಾನ ಇಲಾಖೆ

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 2ರವರೆಗೂ ಮಳೆ ಮುಂದುವರೆಯಲಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ…

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆಪ್ಟೆಂಬರ್ 2ರವರೆಗೂ ಮಳೆ ಮುಂದುವರೆಯಲಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಹಾಸನ, ವಿಜಯಪುರ, ಯಾದಗಿರಿ, ಕಲಬುರಗಿ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೀದರ್, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.