ಇಂದಿನಿಂದ 5 ದಿನ ರಾಜ್ಯದೆಲ್ಲೆಡೆ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು: ಇಂದಿನಿಂದ ಜೂನ್ 30ರ ವರೆಗೆ ಐದು ದಿನಗಳ ಕಾಲ ರಾಜ್ಯದೆಲ್ಲೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.  ಇಂದು ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಿಗೆ ಆರೆಂಜ್…

ಬೆಂಗಳೂರು: ಇಂದಿನಿಂದ ಜೂನ್ 30ರ ವರೆಗೆ ಐದು ದಿನಗಳ ಕಾಲ ರಾಜ್ಯದೆಲ್ಲೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

ಇಂದು ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಹಾಗೂ ಉತ್ತರ ಒಳನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಅನ್ನು ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಮಂಡ್ಯ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರದಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ.

ಇನ್ನು ಕೋಟೆ, ಗದಗ, ಬೀದರ್, ರಾಯಚೂರು, ಬಳ್ಳಾರಿ ಹಾಗೂ ಯಾದಗಿರಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಲ್ಲೂ ಮುಂದಿನ ಮೂರು ದಿನಗಳ ಕಾಲ ಮಳೆ ಸಾಧ್ಯತೆ ಇದೆ. ಇಂದಿನಿಂದ ಜೂನ್ 29ರ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಸದ್ಯ ನಗರದಲ್ಲೆಡೆ ಮೋಡ ಕವಿದ ವಾತಾವರಣವಿದ್ದು, ಮುಂಜಾನೆಯಿಂದಲೇ ನಗರದ ಕೆಲವು ಭಾಗದಲ್ಲಿ ತುಂತುರು ಮಳೆಯಾಗಿದೆ. ಇದೇ ರೀತಿ ಮುಂದಿನ ಮೂರು ದಿನಗಳ ಕಾಲ ವಾತಾವರಣ ಇರುವ ಸಾಧ್ಯತೆಗಳಿವೆ. Ad

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.