ಬೆಂಗಳೂರು: ಜುಲೈ 9ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಳಿಗೆ ಇಂದು ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದ್ದು, ಹವಾಮಾನ ಇಲಾಖೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಿದೆ.
ಉತ್ತರ ಒಳನಾಡು ಜಿಲ್ಲೆಗಳ ಕೆಲವು ಕಡೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಮಳೆಯಾಗುವ ಸಾಧ್ಯತೆಯಿದೆ. ಇಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




