Karnataka Rain ರಾಜ್ಯಾದ್ಯಂತ ಮಳೆಯ ಆರ್ಭಟ : ಈ ಪ್ರವಾಸಿ ತಾಣ, ಜಲಪಾತಗಳಿಗೆ ಪ್ರವೇಶ ನಿಷೇಧ

ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಲವಡೆ ನದಿಗಳು ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಲಪಾತಗಳು, ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಯಲ್ಲಾಪುರ ತಾಲೂಕಿನ ಜಲಪಾತಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.ಯಲ್ಲಾಪುರ ತಾಲೂಕಿನ ಎಲ್ಲಾ ಜಲಪಾತಗಳ ವೀಕ್ಷಣೆಗೆ ನಿಷೇಧ ಹೇರಲಾಗಿದೆ. ಯಲ್ಲಾಪುರ ತಾಲೂಕಿನ ಶಿರಲೆ ಜಲಪಾತ, ಕಾನೂರು ಫಾಲ್ಸ್​​​, ಕುಳಿ ಮಾಗೋಡು ಜಲಪಾತ ಬಳಿ ತೆರಳದಂತೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ಇನ್ನು ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಇಂದು ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ಆದೇಶಿಸಲಾಗಿದೆ.

Advertisement

ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಬೆಳ್ತಂಗಡಿ ಹಾಗೂ ಬಂಟ್ವಾಳ ಶಾಲೆಗಳಿಗೆ ಜು.4ರ ಇಂದು ತಹಶೀಲ್ದಾರ್ ರಜೆ ಘೋಷಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಬಂಟ್ವಾಳ ತಾಲೂಕಿನ ಎಲ್ಲ ಶಾಲೆಗಳಿಗೆ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ.

ರಾಜ್ಯದ ಹಲವು ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement