ಬೆಳಗಾವಿ : ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಬೆಳಗಾವಿ ಜಿಲ್ಲೆಯ ಮುನ್ನೆಚ್ಚರಿಕೆ ಕ್ರಮವಾಗಿ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಖಾನಾಪುರ, ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಅಂಗನವಾಡಿ, ಎಲ್ಲ ಸರಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಅದೇ ರೀತಿ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಪದವಿ ಪೂರ್ವ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment