ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಭಾರೀ ಮಳೆ ಸಾಧ್ಯತೆ: ರೆಡ್ ಅಲರ್ಟ್ ಘೋಷಣೆ!

ಬೆಂಗಳೂರು:- ಕರ್ನಾಟಕದ ಹಲವೆಡೆ ಮುಂದಿನ ಮೂರು ದಿನ ಭಾರೀ ಮಳೆ ಆಗಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.…

ಬೆಂಗಳೂರು:- ಕರ್ನಾಟಕದ ಹಲವೆಡೆ ಮುಂದಿನ ಮೂರು ದಿನ ಭಾರೀ ಮಳೆ ಆಗಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಗುರುವಾರ ರಾತ್ರಿ ಮಳೆಯಾಗಿದೆ. ಎಚ್​ಎಎಲ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.2ಡಿಗ್ರಿನ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ

 

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.