SM Krishna ಮಣಿಪಾಲ್ ಆಸ್ಪತ್ರೆಗೆ ದಾಖಲು!

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 92 ವರ್ಷದ ಎಸ್ಎಮ್ ಕೃಷ್ಣ ಅವರಿಗೆ ವಯೋಸಹಜ ಅನಾರೋಗ್ಯ ಕಾಡುತ್ತಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ.ಸತ್ಯನಾರಾಯಣ…

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

92 ವರ್ಷದ ಎಸ್ಎಮ್ ಕೃಷ್ಣ ಅವರಿಗೆ ವಯೋಸಹಜ ಅನಾರೋಗ್ಯ ಕಾಡುತ್ತಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ.ಸತ್ಯನಾರಾಯಣ ಹಾಗೂ ಸನಿಲ್ ಕಾರಂತ್ ನೇತೃತ್ವದಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ.

ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿ ಎಸ್ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು. ಈ ಹಿಂದೆ ಕೂಡ ಉಸಿರಾಟದ ಸಮಸ್ಯೆಯಿಂದ ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಮತ್ತೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.