ಬೆಂಗಳೂರು:-ಖಾಸಗಿ ವಾಹಿನಿಯಲ್ಲಿ ಪ್ರಸಾರ ಆಗುತ್ತಿದ್ದ ಕನ್ನಡತಿ ಸೀರಿಯಲ್ ನಲ್ಲಿ ಹೆಚ್ಚು ಜನಮನ್ನಣೆ ಗಳಿಸಿದ್ದ ಕಿರಣ್ ರಾಜ್ ಅವರು ರಸ್ತೆ ಅಪಘಾತಕ್ಕೆ ಒಳಗಾಗಿದ್ದಾರೆ.
ಅದೃಷ್ಟವಶಾತ್ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಪಾರಾಗಿದ್ದಾರೆ. ಅವರ ನಟನೆಯ ‘ರಾನಿ’ ಸಿನಿಮಾ ಈ ವಾರ ರಿಲೀಸ್ ಆಗಬೇಕಿತ್ತು. ಅದಕ್ಕೂ ಮೊದಲು ಈ ರೀತಿ ಆಗಿದೆ. ಕಿರಣ್ ರಾಜ್ ಎದೆ ಭಾಗಕ್ಕೆ ಪೆಟ್ಟಾಗಿದ್ದು, ಕಾರಿಗೆ ಹಾನಿ ಆಗಿದೆ. ಕಿರಣ್ ರಾಜ್ಗೆ ಕೆಂಗೇರಿ ಬಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಿರಣ್ ರಾಜ್ ಅವರು ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಅವರು ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ಕಿರಣ್ ರಾಜ್ ತೆರಳಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಅವರು ಓಡಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರಿನ ಬಲಭಾಗಕ್ಕೆ ಹಾನಿ ಆಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment