ಕೋಲಾರ:- ವಾಯುಸೇನಾ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ!

ಕೋಲಾರ :- ವಾಯುಸೇನಾ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶವಾಗಿರುವ ಘಟನೆ ಕೋಲಾರದ ಬಂಗಾರಪೇಟೆ ತಾಲ್ಲೂಕಿನ ಕರಪನಹಳ್ಳಿ ಜರುಗಿದೆ. ವಾಯುಸೇನಾ ಹೆಲಿಕಾಪ್ಟರ್ ಯಲಹಂಕದಿಂದ ಚೆನ್ನೈಗೆ ತೆರಳುತ್ತಿತ್ತು. ಆಕಾಶದಲ್ಲಿ ಹಾರುತ್ತಿದ್ದ ವೇಳೆ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ತುರ್ತು…

ಕೋಲಾರ :- ವಾಯುಸೇನಾ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶವಾಗಿರುವ ಘಟನೆ ಕೋಲಾರದ ಬಂಗಾರಪೇಟೆ ತಾಲ್ಲೂಕಿನ ಕರಪನಹಳ್ಳಿ ಜರುಗಿದೆ.

ವಾಯುಸೇನಾ ಹೆಲಿಕಾಪ್ಟರ್ ಯಲಹಂಕದಿಂದ ಚೆನ್ನೈಗೆ ತೆರಳುತ್ತಿತ್ತು. ಆಕಾಶದಲ್ಲಿ ಹಾರುತ್ತಿದ್ದ ವೇಳೆ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ತುರ್ತು ಭೂ ಸ್ಪರ್ಶ ಮಾಡಲಾಗಿದೆ.

ಮಹಿಳಾ ಪೈಲಟ್ ಸೇರಿದಂತೆ ಇಬ್ಬರು ಹೆಲಿಕಾಪ್ಟರ್​ನಲ್ಲಿದ್ದು, ಸದ್ಯ ಸುರಕ್ಷಿತವಾಗಿದ್ದಾರೆ. ರಾತ್ರಿ 10 ಗಂಟೆ ನಂತರ ತಾಂತ್ರಿಕ ದೋಷ ನಿವಾರಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ. ಸೇನಾ ಹೆಲಿಕಾಪ್ಟರ್​​ ತುರ್ತು ಭೂ ಸ್ಪರ್ಶ ಹಿನ್ನೆಲೆ ಮತ್ತೊಂದು ಹೆಲಿಕಾಪ್ಟರ್ ಸ್ಥಳಕ್ಕೆ ಬಂದಿದೆ. ವಾಯುಸೇನೆಯ ಮೆಕ್ಯಾನಿಕ್ಸ್ ಕೂಡ ಸ್ಥಳಕ್ಕೆ ಬಂದಿಳಿದಿದ್ದಾರೆ.

Vijayaprabha Mobile App free

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.