ಭಾರತದ ಏಕೈಕ ಸೋಷಿಯಲ್ ಮೀಡಿಯಾ ಆ್ಯಪ್ ಕೂ ಸ್ಥಗಿತ

ಬೆಂಗಳೂರು: ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಎಕ್ಸ್‌ಗೆ ಪ್ರತಿಸ್ಪರ್ಧಿಯಾಗಿ ಹುಟ್ಟಿಕೊಂಡಿದ್ದ ಭಾರತೀಯ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ ಕೂ ಅನ್ನು ಮುಚ್ಚಲಾಗುತ್ತಿದೆ ಎಂದು ಅದರ ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣ ಅವರು ಲಿಂಕ್ಡ್‌ಇನ್‌ನಲ್ಲಿ ಬುಧವಾರ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಡೈಲಿಹಂಟ್ ಸೇರಿದಂತೆ ಅನೇಕ…

ಬೆಂಗಳೂರು: ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಎಕ್ಸ್‌ಗೆ ಪ್ರತಿಸ್ಪರ್ಧಿಯಾಗಿ ಹುಟ್ಟಿಕೊಂಡಿದ್ದ ಭಾರತೀಯ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ ಕೂ ಅನ್ನು ಮುಚ್ಚಲಾಗುತ್ತಿದೆ ಎಂದು ಅದರ ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣ ಅವರು ಲಿಂಕ್ಡ್‌ಇನ್‌ನಲ್ಲಿ ಬುಧವಾರ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಡೈಲಿಹಂಟ್ ಸೇರಿದಂತೆ ಅನೇಕ ಕಂಪನಿಗಳೊಂದಿಗೆ ಸಂಭಾವ್ಯ ಮಾರಾಟ ಅಥವಾ ವಿಲೀನಕ್ಕಾಗಿ ಹಲವಾರು ಸುತ್ತಿನ ಮಾತುಕತೆಗಳು ವಿಫಲವಾದ ನಂತರ ಈ ನಿರ್ಧಾರ ಹೊರಬಿದ್ದಿದೆ.

“ಕೂ ಅನ್ನು ಮಾರುವ ಅವರ ಸತತ ಪ್ರಯತ್ನಗಳು ಫಲಕೊಡದೇ ಹೋದ್ದರಿಂದ ಅಂತಿಮವಾಗಿ ವಿದಾಯ ಹೇಳಲಾಗಿದೆ. ಸೋಷಿಯಲ್ ಮೀಡಿಯಾ ತಾಣವನ್ನು ನಿರ್ವಹಿಸಲು ಬಹಳವೇ ವೆಚ್ಚವಾಗುತ್ತದೆ. ಹೆಚ್ಚು ದಿನ ಇದನ್ನು ಮುಂದುವರಿಸಲು ಆಗುವುದಿಲ್ಲ ಎಂದು Koo ಸಂಸ್ಥಾಪಕರಾದ ಅಪ್ರಮೇಯ ರಾಧಾಕೃಷ್ಣ ಮತ್ತು ಮಯಾಂಕ್ ಬಿಡವಟ್ಕಾ ಅವರು ಲಿಂಕ್ಡ್‌ಇನ್ ಪೋಸ್ಟ್‌ನಲ್ಲಿ ಬುಧವಾರ ಬರೆದಿದ್ದಾರೆ.

Vijayaprabha Mobile App free

ಇದರೊಂದಿಗೆ ಭಾರತದ ಏಕೈಕ ಸೋಷಿಯಲ್ ಮೀಡಿಯಾ ಆ್ಯಪ್ ಎಂಬ ಹೆಗ್ಗಳಿಕೆಯಲ್ಲಿದ್ದ ಕೂ ಧ್ವನಿ ನಿಂತಂತಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.