(Labourer Children) 2024-25ನೇ ಸಾಲಿನ ಸಂಘಟಿತ ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಿದ್ದು, ಈ ಕೆಳಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು, ಅರ್ಜಿ ಸಲ್ಲಿಕೆ ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಯಾರು ಈ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಬಹುದು?:
* ಸಂಘಟಿತ ಕಾರ್ಮಿಕರ ಮಕ್ಕಳಾದ, ಪ್ರೌಢ ಶಾಲೆ, ಸ್ನಾತ್ತಕೋತ್ತರ, ಪದವಿ ಹಾಗೂ ವೈದ್ಯಕೀಯ, ಇಂಜಿನಿಯರಿಂಗ್ ನಲ್ಲಿ ವ್ಯಾಸಂಗ ಮಾಡುತ್ತಿರುವವರು ಅರ್ಹರಾಗಿರುತ್ತಾರೆ.
* ಶೈಕ್ಷಣಿಕ ಪ್ರೋತ್ಸಾಹಧನ ಸಹಾಯ ಬಯಸುವ ವಿದ್ಯಾಥಿಗಳು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50, ಪ.ಜಾ, ಪ.ಪಂ.ಶೇ 45 ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು.
* ಕಾರ್ಮಿಕರ ಮಾಸಿಕ ವೇತನ ರೂ.35,000 ಗಿಂತ ಮೀರಿರಬಾರದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಜನವರಿ 31, 2025
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48, 1ನೇ & 2ನೇ ಮಹಡಿ, ಮತ್ತಿಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು ಇಲ್ಲಿಗೆ ಖುದ್ದಾಗಿ ಭೇಟಿ ನೀಡಬಹುದು. ಅಥವಾ ದೂ,ಸಂ 080-23475188, 8277291175, 8277120505, 9141585402, 9141602562 ಗೆ ಕರೆ ಮಾಡಬಹುದು ಎಂದು ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.