ಮಹಿಳೆಯರಿಗಾಗಿ ಸ್ವಯಂ ಉದ್ಯೋಗ ಆರಂಭಿಸಲು ಕೇಂದ್ರ ಸರ್ಕಾರದಿಂದ ಸಿಗಲಿದೆ 5 ಲಕ್ಷ ಬಡ್ಡಿ ರಹಿತ ಸಾಲ

(Lakhpati Didi Scheme) ಕೇಂದ್ರ ಸರ್ಕಾರವು ಯುವ ಜನತೆ ಸ್ವಯಂ ಉದ್ಯೋಗ ಆರಂಭಿಸಿ ಆರ್ಥಿಕವಾಗಿ ಸದೃಢರಾಗಲಿ ಎಂಬ ಉದ್ದೇಶವನ್ನಿಟ್ಟುಕೊಂಡು ಅರ್ಹರಿಗೆ 5 ಲಕ್ಷ ವರೆಗೆ ಬಡ್ಡಿ ರಹಿತ ಸಾಲ ಮತ್ತು ವಿವಿಧ ಕೌಶಲ್ಯ ತರಬೇತಿ…

(Lakhpati Didi Scheme) ಕೇಂದ್ರ ಸರ್ಕಾರವು ಯುವ ಜನತೆ ಸ್ವಯಂ ಉದ್ಯೋಗ ಆರಂಭಿಸಿ ಆರ್ಥಿಕವಾಗಿ ಸದೃಢರಾಗಲಿ ಎಂಬ ಉದ್ದೇಶವನ್ನಿಟ್ಟುಕೊಂಡು ಅರ್ಹರಿಗೆ 5 ಲಕ್ಷ ವರೆಗೆ ಬಡ್ಡಿ ರಹಿತ ಸಾಲ ಮತ್ತು ವಿವಿಧ ಕೌಶಲ್ಯ ತರಬೇತಿ ನೀಡುತ್ತಿದೆ. ಕೇಂದ್ರ ಸರ್ಕಾರದ ಈ ಯೋಜನೆಯ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ.

ಕೇಂದ್ರ ಸರ್ಕಾರವು ಮಹಿಳೆಯರ ಸಬಲೀಕರಣಕ್ಕಾಗಿ ವಿವಿಧ ಯೋಜನೆಗಳನ್ನು ತಂದಿದೆ. ಅದರಲ್ಲಿ ಪ್ರಮುಖವಾಗಿ ಗ್ರಾಮೀಣ ಭಾಗದ ಮಹಿಳೆಯರಿಗೆ ಹಲವು ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಆದರೆ ಗ್ರಾಮೀಣ ಭಾಗದ ಮಹಿಳೆಯರಿಗೆ ಇದರ ಬಗ್ಗೆ ಸರಿಯಾದ ಮಾಹಿತಿ ಇರುವುದಿಲ್ಲ. ಗ್ರಾಮೀಣ ಭಾಗದ ಮಹಿಳೆಯರಿಗಾಗಿಯೇ ಇರುವ ಈ ಒಂದು ಹೊಸ ಯೋಜನೆಯ ಬಗ್ಗೆ ಈ ಲೇಖನದಲ್ಲಿ ತಿಳಿದುಕೊಂಡು ಇದರ ಸದುಪಯೋಗಪಡಿಸಿಕೊಳ್ಳಿ.

ಯೋಜನೆಯ ವಿವರ:
ಮಹಿಳೆಯರ ಸಬಲೀಕರಣಕ್ಕಾಗಿ ಇರುವ ಈ ಯೋಜನೆಯ ಹೆಸರೇ “ಲಕ್ ಪತಿ ದೀದಿ ಯೋಜನೆ”. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2023 ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದು, ಮಹಿಳೆಯರ ಸ್ವಯಂ ಉದ್ಯೋಗ ಅಥವಾ ಸಣ್ಣ ಉದ್ಯಮಗಳನ್ನು ಪ್ರಾರಂಭಿಸಲು ಪ್ರೋತ್ಸಾಹಿಸುವ ಉದ್ದೇಶದಿಂದಾಗಿ ಈ ಒಂದು ಯೋಜನೆಯನ್ನು ಘೋಷಿಸಿದ್ದಾರೆ. ಇದರಿಂದ ಮಹಿಳೆಯರು ಸ್ವಯಂ ಉದ್ಯೋಗವನ್ನು ಆರಂಭಿಸಿ ಆರ್ಥಿಕವಾಗಿ ಸದ್ಬಡರಾಗುವ ಉದ್ದೇಶವನ್ನು ಕೇಂದ್ರ ಸರ್ಕಾರವು ಹೊಂದಿದೆ. ಈ ಯೋಜನೆಯ ಅಡಿಯಲ್ಲಿ ಸ್ವಯಂ ಉದ್ಯೋಗ ಆರಂಭಿಸ ಬಯಸುವ ಮಹಿಳೆಯರಿಗೆ ಆರ್ಥಿಕ ಸಹಾಯಧನದ ಜೊತೆಗೆ ಕೌಶಲ್ಯ ತರಬೇತಿಯನ್ನು ಕೂಡ ನೀಡಲಾಗುತ್ತದೆ.

Vijayaprabha Mobile App free

ಈ ಯೋಜನೆಯನ್ನು ಸಮರ್ಪಕವಾಗಿ ಜಾರಿಗೆ ತರಲು ಆಗಸ್ಟ್ 25ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಒಟ್ಟು 11 ಲಕ್ಷ ಮಹಿಳೆಯರಿಗೆ ಲಕ್ ಪತಿ ದೀದಿ ಯೋಜನೆಯ ಅಡಿಯಲ್ಲಿ ಪ್ರಮಾಣ ಪತ್ರ ನೀಡಿದ್ದಾರೆ. ವಿವಿಧ ವರದಿಯ ಪ್ರಕಾರ ಈ ಯೋಜನೆ ಅಡಿಯಲ್ಲಿ ಒಟ್ಟು 4.3 ಲಕ್ಷ ಸ್ವಸಹಾಯ ಗುಂಪುಗಳಲ್ಲಿ ಒಟ್ಟು 43 ಲಕ್ಷ ಮಹಿಳೆಯರು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ.

ಇದರಲ್ಲಿ ಪ್ರಮುಖವಾಗಿ ಮಹಿಳಾ ಸ್ವಸಹಾಯ ಗುಂಪುಗಳಿಗೆ ಡ್ರೋನ್ ಗಳನ್ನು ಒದಗಿಸಿ, ಇದನ್ನು ನಿರ್ವಹಿಸಲು ಮತ್ತು ದುರಸ್ತಿ ಮಾಡುವ ತರಬೇತಿಯನ್ನು ನೀಡಿ ಅದರಿಂದ ಮಹಿಳೆಯರಿಗೆ ಆದಾಯ ಗಳಿಸಲು ಸಹಾಯವಾಗುವಂತೆ ಮಾಡಲಾಗುತ್ತದೆ. ಇದರ ಜೊತೆಗೆ ಮಹಿಳೆಯರಿಗೆ ಎಲ್ಇಡಿ ಬಲ್ಪ್ ತಯಾರಿಕೆ ಮತ್ತು ಇತರೆ ಪ್ಲಂಬಿಂಗ್ ಕೌಶಲ್ಯಗಳ ತರಬೇತಿಯನ್ನು ಕೂಡ ನೀಡಲಾಗುತ್ತದೆ.

ಯೋಜನೆಗೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಇರಬೇಕಾದ ಅರ್ಹತೆಗಳು:
* ಅರ್ಜಿ ಸಲ್ಲಿಸಲು ಮಹಿಳೆಯರ ಕುಟುಂಬದ ಸದಸ್ಯರು ಸರ್ಕಾರಿ ನೌಕರಿಯಲ್ಲಿರಬಾರದು.
* ಅರ್ಜಿದಾರ ಮಹಿಳೆಯ ಕುಟುಂಬ ವಾರ್ಷಿಕ ವರಮಾನವು 3 ಲಕ್ಷ ರೂಪಾಯಿ ಒಳಗಿರಬೇಕು.
* ಅರ್ಜಿ ಸಲ್ಲಿಸಲು ಮಹಿಳೆಯರು ಮಾತ್ರ ಅರ್ಹರು.

ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:
* ಮೊಬೈಲ್ ನಂಬರ್
* ಆಧಾರ್ ಕಾರ್ಡ್
* ಆದಾಯ ಪ್ರಮಾಣ ಪತ್ರ
* ರೇಷನ್ ಕಾರ್ಡ್
* ವಸತಿ ಪ್ರಮಾಣ ಪತ್ರ

ಅರ್ಜಿ ಹೇಗೆ ಸಲ್ಲಿಸಬೇಕು?:
ಯೋಜನೆಗೆ ಅರ್ಜಿ ಸಲ್ಲಿಸಲ ಮೊದಲ ನೀವು ಸ್ವಸಹಾಯ ಗುಂಪುಗಳಿಗೆ ಸೇರಿಕೊಳ್ಳಬೇಕು. ಒಂದು ವೇಳೆ ನೀವು ಈಗಾಗಲೇ ಸ್ವಸಹಾಯ ಗುಂಪುಗಳಲ್ಲಿದ್ದರೆ ನಿಮ್ಮ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ನಿಮಗೆ ತರಬೇತಿ ನೀಡಲಾಗುತ್ತದೆ. ತರಬೇತಿ ನಂತರ ಅಗತ್ಯವಿರುವ ಹಣಕಾಸಿನ ನೆರವನ್ನು ನೀಡಲಾಗುತ್ತದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.