ಶಿವಮೊಗ್ಗ: ಲಾಡ್ಜ್‌ವೊಂದರಲ್ಲಿ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ಉಡುಪಿ ಮೂಲದ ಪ್ರಸನ್ನ ಶೆಟ್ಟಿ(45) ಆತ್ಮಹತ್ಯೆ ಮಾಡಿಕೊಂಡವರು. ತೀರ್ಥಹಳ್ಳಿಯ ಬಾಳೆಬೈಲಿನಲ್ಲಿರುವ ಲಾಡ್ಜ್‌ನಲ್ಲಿ ಇವರು ಎರಡು ದಿನದಿಂದ ರೂಮ್ ಬಾಡಿಗೆ ಪಡೆದಿದ್ದರು. ಎರಡು ದಿನಗಳಾದರು ರೂಮಿನ ಕೊಠಡಿಯ ಬಾಗಿಲು ತೆರೆಯದಿದ್ದಾಗ ಲಾಡ್ಜ್ ಸಿಬ್ಬಂದಿ ಅನುಮಾನಗೊಂಡು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವ್ಯವಹಾರದಲ್ಲಿ ನಷ್ಟ ಅನುಭವಿಸಿದ ಕಾರಣ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.