ಲೋಕಸಭೆಯಲ್ಲಿ ಕನ್ನಡದಲ್ಲೇ ಹೆಚ್‍ಡಿಕೆ, ಜೋಶಿ, ಸೋಮಣ್ಣ, ಶೋಭಾ ಪ್ರಮಾಣವಚನ ಸ್ವೀಕಾರ

ನವದೆಹಲಿ: ಕೇಂದ್ರ ಸಚಿವರಾಗಿ ನೇಮಕಗೊಂಡಿರುವ ರಾಜ್ಯದ ಸಂಸದರಾದ ಹೆಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ , ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆಯವರು ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನೂತನ ಸಚಿವರಿಗೆ ರಾಷ್ಟ್ರಪತಿ ಭವನದಲ್ಲಿ ಹಂಗಾಮಿ ಸ್ಪೀಕರ್ ಒಡಿಶಾದ…

ನವದೆಹಲಿ: ಕೇಂದ್ರ ಸಚಿವರಾಗಿ ನೇಮಕಗೊಂಡಿರುವ ರಾಜ್ಯದ ಸಂಸದರಾದ ಹೆಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ , ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆಯವರು ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನೂತನ ಸಚಿವರಿಗೆ ರಾಷ್ಟ್ರಪತಿ ಭವನದಲ್ಲಿ ಹಂಗಾಮಿ ಸ್ಪೀಕರ್ ಒಡಿಶಾದ ಬಿಜೆಪಿ ಸಂಸದ ಭತೃಹರಿ ಮಹತಾಬ್ ಅವರು ಪ್ರಮಾಣವಚನ ಬೋಧಿಸಿದ್ದಾರೆ. ಈ ವೇಳೆ ಮೂವರು ನೂತನ ಸಚಿವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಹೆಚ್.ಡಿ ಕುಮಾರಸ್ವಾಮಿಯವರಿಗೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ, ಪ್ರಹ್ಲಾದ್ ಜೋಶಿಯವರಿಗೆ ಕಲ್ಲಿದ್ದಲು ಮತ್ತು ಗಣಿ ಇಲಾಖೆ , ರೈಲ್ವೇ ಇಲಾಖೆಯನ್ನು ವಿ.ಸೋಮಣ್ಣ ಅವರಿಗೆ ನೀಡಲಾಗಿದೆ. ಶೋಭಾ ಕರಂದ್ಲಾಜೆಯವರು ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.