ನವದೆಹಲಿ:ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 30 ರೂ. ಇಳಿಕೆ ಮಾಡಿದೆ.
ದರ ಇಳಿಕೆಯಿಂದ ದೆಹಲಿಯಲ್ಲಿ ಮೊದಲು 1,676 ರೂ.ಗೆ ಮಾರಾಟವಾಗುತ್ತಿದ್ದ 19 ಕೆಜಿ ಸಿಲಿಂಡರ್ ಈಗ 1,646 ರೂ.ಗೆ ಮಾರಾಟವಾಗುತ್ತಿದೆ. ಮುಂಬೈನಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1,598 ರೂ., ಕೋಲ್ಕತ್ತಾದಲ್ಲಿ 1,756 ರೂ. ಇದೆ.
ಗೃಹ ಬಳಕೆಯಲ್ಲಿ ಬಳಸುವ ಬಳಸುವ 14.2 ಕೆಜಿ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಂಗಳೂರಿನಲ್ಲಿ 14.2 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ 905.50 ರೂ.ದರವಿದೆ.ದೆಹಲಿಯಲ್ಲಿ 803 ರೂ. ಕೋಲ್ಕತ್ತಾದಲ್ಲಿ 829 ರೂ. ಚೆನ್ನೈನಲ್ಲಿ 818.50 ರೂ. ಮತ್ತು ಮುಂಬೈನಲ್ಲಿ 802.50 ರೂ. ಇದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.