ಮಹಾರಾಷ್ಟ್ರದಲ್ಲಿ ಪೊಲೀಸ್‌ ಕಮಾಂಡೋಗಳ ಎನ್‌ಕೌಂಟರ್‌ಗೆ 12 ನಕ್ಸಲರು ಸಾವು

ಮುಂಬೈ: ಮಹಾರಾಷ್ಟ್ರದ ಕಂಕೇರ್ ಬಳಿಯ ಛತ್ತೀಸ್‌ಗಢ-ಗಡ್‌ಚಿರೋಲಿ ಗಡಿಯಲ್ಲಿರುವ ವಂಡೋಲಿ ಗ್ರಾಮದಲ್ಲಿ ಪೊಲೀಸ್ ಸಿ60 ಕಮಾಂಡೋಗಳು ನಡೆಸಿದ ಕಾರ್ಯಾಚರಣೆಯಲ್ಲಿ 12 ನಕ್ಸಲರು ಸಾವನ್ನಪ್ಪಿದ್ದಾರೆ. ಕಾರ್ಯಾಚರಣೆ ವೇಳೆ ಸಬ್‌ಇನ್‌ಸ್ಪೆಕ್ಟರ್‌ ಸತೀಶ್ ಪಾಟೀಲ್ ಅವರ ಎಡ ಭುಜಕ್ಕೆ ಗುಂಡು ತಗುಲಿದೆ.…

ಮುಂಬೈ: ಮಹಾರಾಷ್ಟ್ರದ ಕಂಕೇರ್ ಬಳಿಯ ಛತ್ತೀಸ್‌ಗಢ-ಗಡ್‌ಚಿರೋಲಿ ಗಡಿಯಲ್ಲಿರುವ ವಂಡೋಲಿ ಗ್ರಾಮದಲ್ಲಿ ಪೊಲೀಸ್ ಸಿ60 ಕಮಾಂಡೋಗಳು ನಡೆಸಿದ ಕಾರ್ಯಾಚರಣೆಯಲ್ಲಿ 12 ನಕ್ಸಲರು ಸಾವನ್ನಪ್ಪಿದ್ದಾರೆ.

ಕಾರ್ಯಾಚರಣೆ ವೇಳೆ ಸಬ್‌ಇನ್‌ಸ್ಪೆಕ್ಟರ್‌ ಸತೀಶ್ ಪಾಟೀಲ್ ಅವರ ಎಡ ಭುಜಕ್ಕೆ ಗುಂಡು ತಗುಲಿದೆ. ಈ ಪ್ರದೇಶದಲ್ಲಿ 12ರಿಂದ 15 ನಕ್ಸಲರು ಕ್ಯಾಂಪ್ ಮಾಡುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿ ಆಧರಿಸಿ, ಉಪ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ನಕ್ಸಲ್‌ ವಿರೋಧಿ ಕಾರ್ಯಾಚರಣೆ ನಡೆಸಲಾಗಿತ್ತು.

ಎಲ್ಲಾ 12 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ವಯಂಚಾಲಿತ ಮೆಷಿನ್ ಗನ್‌ಗಳು, ಭಾರೀ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ನಕ್ಸಲೀಯರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್‌ ತಿಳಿಸಿದ್ದಾರೆ.

Vijayaprabha Mobile App free

ಎನ್‌ಕೌಂಟರ್‌ನಲ್ಲಿ ಸಬ್‌ಇನ್ಸ್‌ಪೆಕ್ಟರ್ ಮತ್ತು ಜವಾನ ಗಾಯಗೊಂಡಿದ್ದಾರೆ. ಆದರೆ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. ರಾಜ್ಯ ಸರ್ಕಾರದ ಪರವಾಗಿ ಗಡ್ಚಿರೋಲಿ ಪೊಲೀಸರಿಗೆ 51 ಲಕ್ಷ ರೂ. ಬಹುಮಾನವನ್ನು ಘೋಷಿಸಲಾಗಿದೆ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.