ಮಂಡ್ಯ:ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಹುಚ್ಚಾಟ ನಡೆಸಿ ಖಾಸಗಿ ಬಸ್ ಚಾಲಕ ಮತ್ತು ಸಹ ಚಾಲಕನನ್ನು ಪೊಲೀಸರ ಅತಿಥಿಗಳಾಗಿದ್ದಾರೆ.
ಚಾಲಕ ವಿರುದ್ಧ ದಿಕ್ಕಿನಲ್ಲಿ ಬಸ್ ಓಡಿಸುತ್ತಿರುವ ವೀಡಿಯೋವನ್ನು ಪ್ರಯಾಣಿಕರೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪರಿಣಾಮ, ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಡಿಜಿಪಿ ಅಲೋಕ್ ಕುಮಾರ್ ರನ್ನು ಟ್ಯಾಗ್ ಮಾಡಿ ತನ್ನ ಎಕ್ಸ್ ಖಾತೆ ಮೂಲಕ ಈ ವೀಡಿಯೋ ಪೋಸ್ಟ್ ಮಾಡಲಾಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಶ್ರೀರಂಗಪಟ್ಟಣ ಗ್ರಾಮಾಂತರ ಪೋಲೀಸರು ಕಾರ್ಯಾಚರಣೆ ನಡೆಸಿ ಚಾಲಕ ಪ್ರಶಾಂತ್ ಹಾಗೂ ಸಹ ಚಾಲಕ ನೀಲಪ್ಪನನ್ನು ಬಂಧಿಸಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ಆರೋಪದಡಿ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment