ನವದೆಹಲಿ: ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಿ ದೆಹಲಿ ಕೋರ್ಟ್ ಇಂದು ಆದೇಶ ಹೊರಡಿಸಿದೆ.
ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ದೆಹಲಿ ಕೋರ್ಟ್ ನ ವಿಶೇಷ ನ್ಯಾಯಾಧೀಶೆ ಕಾವೇರಿ ಬಾವೇಜಾ ಅವರು ಆದೇಶ ಹೊರಡಿಸಿದ್ದಾರೆ.
ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರನ್ನು ಕಳೆದ ವರ್ಷ ಮಾರ್ಚ್ 9ರಂದು ಇಡಿ ಬಂಧಿಸಿತ್ತು. ಈ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಶುಕ್ರವಾರ 9ನೇ ಚಾರ್ಜ್ ಶೀಟ್ ಸಲ್ಲಿಸಿತ್ತು. ಈ ಚಾರ್ಜ್ ಶೀಟ್ ನಲ್ಲಿ ವಿನೋದ್ ಚೌಹಾನ್ ಎನ್ನುವ ವ್ಯಕ್ತಿಯನ್ನು ಆರೋಪಿಯೆಂದು ಹೆಸರಿಸಲಾಗಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.
ಪ್ರಕರಣದ ತನಿಖೆ ನಡೆಸಲು ಚೌಹಾನ್ ಅವರನ್ನು ಮೇ ನಲ್ಲಿ ಬಂಧಿಸಲಾಗಿತ್ತು. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯು ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್, ಕೆ.ಕವಿತಾ ಸೇರಿ ಹಲವರನ್ನು ಬಂಧಿಸಿದ್ದಾರೆ.