ರಾಜ್ಯದ ಮಹಿಳಾ ಉದ್ಯೋಗಿಗಳಿಗೆ ವಾರ್ಷಿಕವಾಗಿ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆ

ಬೆಂಗಳೂರು: ಖಾಸಗಿ ಮತ್ತು ಸಾರ್ವಜನಿಕ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ವಾರ್ಷಿಕವಾಗಿ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆಯನ್ನು ಪರಿಚಯಿಸಲು ಕರ್ನಾಟಕ ಸರ್ಕಾರ ಸಿದ್ಧವಾಗಿದೆ. ಇದನ್ನು ಪರಿಶೀಲಿಸಲು ರಚಿಸಲಾದ ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿದ…

ಬೆಂಗಳೂರು: ಖಾಸಗಿ ಮತ್ತು ಸಾರ್ವಜನಿಕ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ವಾರ್ಷಿಕವಾಗಿ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆಯನ್ನು ಪರಿಚಯಿಸಲು ಕರ್ನಾಟಕ ಸರ್ಕಾರ ಸಿದ್ಧವಾಗಿದೆ. ಇದನ್ನು ಪರಿಶೀಲಿಸಲು ರಚಿಸಲಾದ ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿದ ನಂತರ ಅನುಷ್ಠಾನಗೊಳಿಸುವ ಸಂಬಂಧ ಕ್ರಮ ಕೈಗೊಳ್ಳಲಾಗುವುದು.

ಡಾ ಸಪ್ನಾ ಮುಖರ್ಜಿ ನೇತೃತ್ವದ ತಂಡವನ್ನು ರಚಿಸಲಾಗಿದೆ, ಅದು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಿದೆ. ಈ ಸಂಬಂಧ ಎಲ್ಲ ಇಲಾಖೆಗಳೊಂದಿಗೆ ಚರ್ಚೆ ನಡೆಸುತ್ತೇವೆ. ಅನುಮೋದನೆಗಾಗಿ ನ್ನು ಶಾಸಕಾಂಗದ ಮುಂದೆ ಇಡಲಾಗುವುದು ಎಂದು ಕಾರ್ಮಿಕ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ TNIE ಗೆ ತಿಳಿಸಿದರು. ಆರಂಭಿಕ ಹಂತವಾಗಿ ಖಾಸಗಿ ವಲಯಕ್ಕೆ ಮುಟ್ಟಿನ ರಜೆ ನೀತಿ ಪರಿಚಯಿಸಲು ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ. ಪೂರ್ಣ ಪ್ರಮಾಣದಲ್ಲಿ ನೀತಿ ರೂಪಿಸಿದ ನಂತರ ಸರ್ಕಾರಿ ಇಲಾಖೆಗಳಲ್ಲಿ ಕಡ್ಡಾಯಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಮೊಹ್ಸಿನ್ ಹೇಳಿದ್ದಾರೆ. ಮುಟ್ಟಿನ ರಜೆ ವಿಚಾರವಾಗಿ ಒಂದು ನೀತಿಯನ್ನು ಹೊಂದುವ ಅಗತ್ಯತೆಯ ಬಗ್ಗೆ ಸುಪ್ರೀಂ ಕೋರ್ಟ್ ಆದೇಶದಲ್ಲಿ ವ್ಯಕ್ತಪಡಿಸಿದ್ದ ಅಭಿಪ್ರಾಯಕ್ಕೆ ಅನುಗುಣವಾಗಿ ಈ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಅವರು ಹೇಳಿದ್ದಾರೆ.

ಮಹಿಳಾ ಸಿಬ್ಬಂದಿಗೆ ಮುಟ್ಟಿನ ರಜೆ ನೀಡುವುದರ ಸಾಧ್ಯಾಸಾಧ್ಯತೆ ಬಗ್ಗೆ ಗಮನಹರಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್​ ಈ ವರ್ಷದ ಜುಲೈನಲ್ಲಿ ನಿರ್ದೇಶನ ನೀಡಿತ್ತು. ಉದ್ಯೋಗದಾತರು ಮುಟ್ಟಿನ ರಜೆ ನೀಡುವುದನ್ನು ಕಡ್ಡಾಯಗೊಳಿಸುವುದರಿಂದ ಮಹಿಳೆಯರಿಗೆ ಅನುಕೂಲವಾಗಬೇಕು. ಅದರ ಬದಲಿಗೆ ಮುಟ್ಟಿನ ರಜೆ ನೀಡುವುದರಿಂದ ಉದ್ಯೋಗಗಳಲ್ಲಿ ಅವರ ಭಾಗವಹಿಸುವಿಕೆಗೆ ಪ್ರತಿಕೂಲವಾಗದಂತೆ ಗಮನಹರಿಸಬೇಕು ಎಂದು ಕೋರ್ಟ್ ಹೇಳಿತ್ತು. ಮುಟ್ಟಿನ ರಜೆಯಿಂದ ಮಹಿಳೆಯರಿಗೆ ಉದ್ಯೋಗಾವಕಾಶ ಕಡಿಮೆ ಆಗಿಬಿಟ್ಟರೆ ಎಂಬ ಆತಂಕವನ್ನೂ ಕೋರ್ಟ್ ವ್ಯಕ್ತಪಡಿಸಿತ್ತು.

Vijayaprabha Mobile App free

ಕರ್ನಾಟಕದಲ್ಲಿ ಮುಟ್ಟಿನ ರಜೆ ನೀತಿ ರೂಪಿಸುವ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಕೂಡ ಸುಳಿವು ನೀಡಿದ್ದರು ಎನ್ನಲಾಗಿದೆ. ಮುಟ್ಟಿನ ರಜೆ ಪ್ರಸ್ತಾವನೆ ಚರ್ಚೆ ಹಂತದಲ್ಲಿದೆ. ಸಚಿವರು ಆ ಬಗ್ಗೆ ನೀತಿ ರೂಪಿಸಲು ಚಿಂತನೆ ನಡೆಸಿದ್ದರು. ಕಾರ್ಮಿಕ ಇಲಾಖೆಯು ಕೆಲವೇ ದಿನಗಳಲ್ಲಿ ಪ್ರಸ್ತಾವನೆಯನ್ನು ಪರಿಶೀಲಿಸಲಿದೆ. ಆ ನಂತರ ಅದು ಇಲಾಖೆ ಮತ್ತು ಸರ್ಕಾರಿ ಹಂತಗಳಲ್ಲಿ ಮುಂದುವರಿಯಲಿದೆ ಎಂದು ಕಾರ್ಮಿಕ ಆಯುಕ್ತ ಡಾ. ಎಚ್ಎನ್ ಗೋಪಾಲಕೃಷ್ಣ ತಿಳಿಸಿದ್ದಾರೆ.

ಕರ್ನಾಟಕವು ಈ ಕ್ರಮವನ್ನು ಮೊದಲು ಖಾಸಗಿ ವಲಯಕ್ಕೆ ಪರಿಚಯಿಸಲು ಯೋಜಿಸಿದೆ ಮತ್ತು ಅದನ್ನು ನೀತಿ ಮಾಡಿದ ನಂತರ ಸರ್ಕಾರಿ ಇಲಾಖೆಗಳಲ್ಲಿ ಕಡ್ಡಾಯವಾಗಿ ಮಾಡಲು ಯೋಜಿಸಿದೆ ಎಂದು ಅವರು ಹೇಳಿದರು. ಈ ವಿಷಯದ ಬಗ್ಗೆ ಒಂದು ನೀತಿಯನ್ನು ಹೊಂದುವ ಅಗತ್ಯತೆಯ ಸುಪ್ರೀಂ ಕೋರ್ಟ್ ಆದೇಶಕ್ಕೆ ಅನುಗುಣವಾಗಿ ಇದು ಎಂದು ಮೊಹ್ಸಿನ್ ಹೇಳಿದರು. “ಮಹಿಳೆಯರು ನಮ್ಮ ಉದ್ಯೋಗಿಗಳಲ್ಲಿ ಗಮನಾರ್ಹ ಭಾಗವಾಗಿದ್ದಾರೆ ಮತ್ತು ಅವರ ಅಗತ್ಯತೆಗಳು ಪುರುಷರಿಗಿಂತ ಭಿನ್ನವಾಗಿವೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು. ಈ ಅಗತ್ಯಗಳಿಗೆ ಸಂವೇದನಾಶೀಲವಾಗಿರುವ ಸರ್ಕಾರವಾಗಿ, ನಾವು ಈ ಸಮಸ್ಯೆಯನ್ನು ಆದ್ಯತೆಯಾಗಿ ತೆಗೆದುಕೊಳ್ಳುತ್ತಿದ್ದೇವೆ ಮತ್ತು ನಾವು ಮಹಿಳೆಯರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಕ್ರಮವನ್ನು ತೆಗೆದುಕೊಳ್ಳುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದರು.

 

 

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.