ರೈಲ್ವೆಯಲ್ಲಿ ಕೆಲಸ ಮಾಡಲು ಕನ್ನಡಿಗರು ಹೆಚ್ಚು ಆಸಕ್ತರಾಗಿಲ್ಲ: ಸಚಿವ ವಿ.ಸೋಮಣ್ಣ

ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಲು ಕನ್ನಡಿಗರು ಹೆಚ್ಚು ಆಸಕ್ತಿ ವಹಿಸುತ್ತಿಲ್ಲ. ಇಲ್ಲಿ ಉತ್ತರ ಭಾರತೀಯರೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ನಗರದ ಗಾಂಧಿ…

ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಲು ಕನ್ನಡಿಗರು ಹೆಚ್ಚು ಆಸಕ್ತಿ ವಹಿಸುತ್ತಿಲ್ಲ. ಇಲ್ಲಿ ಉತ್ತರ ಭಾರತೀಯರೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ನಗರದ ಗಾಂಧಿ ಭವನದಲ್ಲಿ ಡಾ.ಸಿ. ಸೋಮಶೇಖರ – ಎನ್. ಸರ್ವಮಂಗಳ ಸಾಹಿತ್ಯ ಸೇವಾ ಪ್ರತಿಷ್ಠಾನ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ತಾವು ಸಚಿವರಾದ ನಂತರ ಕನ್ನಡದಲ್ಲಿ ರೈಲ್ವೆ ಪರೀಕ್ಷೆ ಬರೆಯಲು ಕಲ್ಪಿಸಿರುವುದರಿಂದ ಕನ್ನಡಿಗರು ಇದರ ಸದುಪಯೋಗ ಪಡೆದುಕೊಳ್ಳಬೇಕು. ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಲು ಕನ್ನಡಿಗರು ಹೆಚ್ಚು ಆಸಕ್ತಿ ವಹಿಸುತ್ತಿಲ್ಲ. ರೈಲ್ವೆ ಇಲಾಖೆಯದ್ದು ಸೂಕ್ಷ್ಮ ಕೆಲಸವಾಗಿದ್ದು, ಕೆಲವೊಮ್ಮೆ ದಿನದ 24 ತಾಸು ಕೆಲಸ ಮಾಡಬೇಕಾಗುತ್ತದೆ ಎನ್ನುವ ಕಾರಣಕ್ಕೆ ಕನ್ನಡಿಗರು ರೈಲ್ವೆ ಕೆಲಸದ ಬಗ್ಗೆ ಆಸಕ್ತಿ ತೋರದಿರಬಹುದು.ರೈಲ್ವೆ ಕೆಲಸ ಒಂದು ರೀತಿ ರಕ್ಷಣಾ ಇಲಾಖೆಯಂತೆ ಸೂಕ್ಷ್ಮವಾದ ಕೆಲಸ. ಇಲ್ಲಿ ಉತ್ತರ ಭಾರತೀಯರೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕನ್ನಡಿಗರು ಸಿವಿಲ್ ಸರ್ವೀಸಸ್‌ಗೆ ತೋರಿಸುವಷ್ಟು ಆಸಕ್ತಿಯನ್ನು ರೈಲ್ವೆ ಹುದ್ದೆಗಳ ಬಗ್ಗೆ ತೋರಿಸುತ್ತಿಲ್ಲ. ಈಗ ಕನ್ನಡದಲ್ಲೇ ರೈಲ್ವೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿರುವುದರಿಂದ ಕನ್ನಡಿಗರು ಇದರ ಉಪಯೋಗ ಮಾಡಿಕೊಳ್ಳಬೇಕು ಎಂದರು.

ಮೋದಿ, ಸಂತೋಷ ಅವಕಾಶ ನೀಡಿದರು:

ರಾಜಕಾರಣ ಯಾರೋ ಕೆಲವರ ಸ್ವತ್ತಲ್ಲ. ನಿಷ್ಕಲ್ಮಷ ಭಾವನೆಯಿಂದ ಕೆಲಸ ಮಾಡುವವರಿಗೆ ಅವಕಾಶ ಸಿಕ್ಕೇ ಸಿಗುತ್ತದೆ. ಎರಡು ಕಡೆ ಸೋತಾಗ ನನ್ನ ಜೊತೆ ಯಾರೂ ಬರಲಿಲ್ಲ. ಆದರೆ, ಪ್ರಧಾನಿ ಮೋದಿ ಮತ್ತು ಬಿ.ಎಲ್. ಸಂತೋಷ ಅವರು ನನಗೆ ಅವಕಾಶ ನೀಡಿ ರೈಲ್ವೆ ಇಲಾಖೆಯ ಜವಾಬ್ದಾರಿ ನೀಡಿದ್ದಾರೆ. ರೈಲ್ವೆಯಲ್ಲಿ ಹೆಚ್ಚೆಚ್ಚು ಕೆಲಸ ಮಾಡಲು ಪ್ರಯತ್ನಿಸುತ್ತಿದ್ದೇನೆ. ತುಮಕೂರಿನ ಕಾಡುಗೊಲ್ಲರು, ಸುಡುಗಾಡು ಸಿದ್ದರು, ಚಾಮರಾಜನಗರದ ಸೋಲಿಗರನ್ನು ಮುಖ್ಯ ವಾಹಿನಿಗೆ ತರುವ ಪ್ರಯತ್ನ ನಡೆದಿದೆ. ಅದಕ್ಕೆ ರಾಜ್ಯ ಸರ್ಕಾರವು ಆದ್ಯತೆ ನೀಡಬೇಕು ಎಂದು ವಿ. ಸೋಮಣ್ಣ ಹೇಳಿದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.