ದೆಹಲಿ: ಕೇಂದ್ರದಲ್ಲಿ 3ನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಲಿದೆ. ಮೊದಲ ಅಧಿವೇಶನದಲ್ಲಿ ಹೊಸದಾಗಿ ಆಯ್ಕೆಯಾದ ಸದಸ್ಯರು ಪ್ರಮಾಣವಚನ ಸ್ವೀಕರಿಸಲಿದ್ದು, ಸ್ಪೀಕರ್ ಆಯ್ಕೆ, ರಾಷ್ಟ್ರಪತಿಗಳ ಭಾಷಣ ಮತ್ತು ಅದರ ಮೇಲೆ ಚರ್ಚೆ ನಡೆಯಲಿದೆ.
ಸಂಸದರ ಪ್ರಮಾಣ ವಚನ ಸ್ವೀಕಾರದ ಬಳಿಕ ನೂತನ ಸ್ಪೀಕರ್ ಆಯ್ಕೆ ನಡೆಯಲಿದೆ. ಇದು ನಮೋ ಯುಗ.. 2014ರಿಂದ ಸತತವಾಗಿ 3ನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರ ಹಿಡಿದಿರೋ ಪ್ರಧಾನಿ ನರೇಂದ್ರ ಮೋದಿ 3.O ಸರ್ಕಾರಕ್ಕೆ ಮೊದಲ ಅಧಿವೇಶನದ ಸವಾಲು ಇದಾಗಿದೆ. ಕೇಂದ್ರದಲ್ಲಿ 3ನೇ ಬಾರಿಗೆ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಂಸತ್ನ ಮೊದಲ ಅಧಿವೇಶನ ಇಂದಿನಿಂದ ಆರಂಭ ಆಗಲಿದೆ. ಅಧಿವೇಶನದ ಮೊದಲ ಎರಡು ದಿನ ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಬೆಳಗ್ಗೆ 11ಗಂಟೆಗೆ ಅಧಿವೇಶನ ಆರಂಭವಾಗಲಿದ್ದು ಮೊದಲಿಗೆ ಪ್ರಧಾನಿ ಮೋದಿ ಪ್ರಮಾಣ ಸ್ವೀಕರಿಸಲಿದ್ದಾರೆ. ಬಳಿಕ ಮಂತ್ರಿ ಮಂಡಲದ ಸದಸ್ಯರಿಗೆ ಪ್ರಮಾಣ ವಚನ ನೀಡಲಾಗುತ್ತದೆ. ನಂತರ ರಾಜ್ಯವಾರು ಸಂಸದರು ಪ್ರತಿಜ್ಞಾವಿಧಿ ಸ್ವೀಕರಿಸ್ತಾರೆ. ಮೊದಲಿಗೆ ಅಸ್ಸಾಂ ಸಂಸದರು, ಕೊನೆಯಲ್ಲಿ ಪಶ್ಚಿಮ ಬಂಗಾಳದ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. Ad