Gruhalakshmi Yojana: ಗೃಹಲಕ್ಷ್ಮಿ ಯೋಜನೆಯ (Gruhalakshmi Yojana) ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ಸಿಕ್ಕಿದೆ. ನಾಳೆ ಅಥವಾ ನಾಡಿದ್ದು ಗೃಹಲಕ್ಷ್ಮಿ ಯೋಜನೆಯ 12 ಮತ್ತು 13 ನೇ ಕಂತಿನ ಹಣ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಹೌದು, ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿಯಾದ ಗೃಹಲಕ್ಷ್ಮಿ ಯೋಜನೆಗೆ ಆರಂಭದಿಂದಲೂ ತಾಂತ್ರಿಕ ಸಮಸ್ಯೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ದೋಷದಿಂದ ಹಣ ಜಮೆ ವಿಳಂಬವಾಗುತ್ತಿದೆ. ಸದ್ಯ ತಾಂತ್ರಿಕ ಸಮಸ್ಯೆ ಪರಿಹರಿಸಲಾಗಿದ್ದು, ನಾಳೆ ಅಥವಾ ನಾಡಿದ್ದು ಗೃಹಲಕ್ಷ್ಮಿ ಹಣ ಖಾತೆಗೆ ಜಮಾ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ
ಸದ್ಯ ಈ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾತನಾಡಿದ್ದು, ಫಲಾನುಭವಿಗಳ ಖಾತೆಗೆ ಮಾಸಿಕ 2 ಸಾವಿರ ರೂ.ದಂತೆ ಇಲ್ಲಿಯವರೆಗೆ 25 ಸಾವಿರ ಕೋಟಿ ಹಣ ಜಮಾ ಮಾಡಲಾಗಿದೆ. ತಾಂತ್ರಿಕ ಕಾರಣದಿಂದ ಏಕಕಾಲಕ್ಕೆ ಬಿಡುಗಡೆ ಸಾಧ್ಯವಾಗುತ್ತಿಲ್ಲ. ಅದನ್ನು ಬಗೆಹರಿಸಿ ಶೀಘ್ರವೇ ಎಲ್ಲಾ ಫಲಾನುಭವಿಗಳಿಗೆ ಪೆಂಡಿಂಗ್ ಇರುವ ಹಣ ಜಮಾ ಮಾಡಲಾಗುವುದು ಎಂದು ಬೆಂಗಳೂರಿನಲ್ಲಿ ಮಾತನಾಡಿದ್ದಾರೆ.
https://vijayaprabha.com/job-news-65/