ಲೈಂಗಿಕ ಕಿರುಕುಳ ಆರೋಪ- ನಟ, ರಾಜಕಾರಣಿ ಮುಕೇಶ್ ಅರೆಸ್ಟ್

ಕೇರಳ: ಮಲಯಾಳಂ ಸಿನಿಮಾರಂಗದಲ್ಲಿ MeToo ಆಂದೋಲನದ ಹಿನ್ನೆಲೆಯಲ್ಲಿ ಲೈಂಗಿಕ ಕಿರುಕುಳದ ಪ್ರಕರಣವನ್ನು ದಾಖಲಿಸಿದ ಜನಪ್ರಿಯ ಮಲಯಾಳಂ ನಟ ಮತ್ತು ಸಿಪಿಐ(ಎಂ) ಶಾಸಕ ಮುಖೇಶ್ ಅವರನ್ನು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಮಂಗಳವಾರ ಬಂಧಿಸಿದೆ.…

ಕೇರಳ: ಮಲಯಾಳಂ ಸಿನಿಮಾರಂಗದಲ್ಲಿ MeToo ಆಂದೋಲನದ ಹಿನ್ನೆಲೆಯಲ್ಲಿ ಲೈಂಗಿಕ ಕಿರುಕುಳದ ಪ್ರಕರಣವನ್ನು ದಾಖಲಿಸಿದ ಜನಪ್ರಿಯ ಮಲಯಾಳಂ ನಟ ಮತ್ತು ಸಿಪಿಐ(ಎಂ) ಶಾಸಕ ಮುಖೇಶ್ ಅವರನ್ನು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಮಂಗಳವಾರ ಬಂಧಿಸಿದೆ.

ಕೊಚ್ಚಿಯ ಕೋಸ್ಟಲ್ ಪೊಲೀಸ್ ಆಫೀಸಿನಲ್ಲಿ ಮುಕೇಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಎಐಜಿ ಪೂಂಗಾಝಾಲಿ ನೇತೃತ್ವದಲ್ಲಿ ನಡೆದ ವಿಚಾರಣೆಯ ನಂತರ ಮುಕೇಶ್ ಬಂಧನವಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದಿರೋ ಮುಕೇಶ್ ಅವರ ಬಂಧನ ಹಲವು ಚರ್ಚೆಗೆ ಕಾರಣವಾಗಿದೆ. ಬಂಧಿಸಿ ನಂತರ ಬಿಡುಗಡೆ ಮಾಡುವ ಮಾಹಿತಿಯೂ ಇದೆ. ಒಟ್ಟಿನಲ್ಲಿ ಮುಕೇಶ್ ಬಂಧನ ಇತರರಲ್ಲಿ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.