ಬಿಜೆಪಿ ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್​ಐಟಿ ದಾಳಿ

ಬೆಂಗಳೂರು: ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಶನಿವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ ಎಸ್​ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ…

ಬೆಂಗಳೂರು: ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಶನಿವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ ಎಸ್​ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ.

ವೈಯಾಲಿಕಾವಲ್ ನ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಎಸ್​ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಫ್​ಎಸ್​​ಎಲ್ ತಂಡದ ಜತೆಗೇ ಎಸ್​ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Vijayaprabha Mobile App free

ಅತ್ಯಾಚಾರ, ಜಾತಿ ನಿಂದನೆ ಹಾಗೂ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ನ್ಯಾಯಾಂಗ ಬಂಧನದಲ್ಲಿದ್ದಾರೆ.

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.