ಬೆದರಿಕೆ ಆರೋಪ: BJP ಶಾಸಕ ಮುನಿರತ್ನ ವಿರುದ್ಧ ಎರಡು ಎಫ್​ಐಆರ್!

ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದಡಿ BJP ಶಾಸಕ ಮುನಿರತ್ನ ವಿರುದ್ಧ ಎರಡು FIR ದಾಖಲಾಗಿದೆ. ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್​ಐಆರ್​ ದಾಖಲಾಗಿವೆ. ಜೀವ ಬೆದರಿಕೆ ಪ್ರಕರಣದಲ್ಲಿ ನಾಲ್ವರು…

ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದಡಿ BJP ಶಾಸಕ ಮುನಿರತ್ನ ವಿರುದ್ಧ ಎರಡು FIR ದಾಖಲಾಗಿದೆ. ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್​ಐಆರ್​ ದಾಖಲಾಗಿವೆ. ಜೀವ ಬೆದರಿಕೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿದ್ದು, ಎ1 ಶಾಸಕ ಮುನಿರತ್ನ ಆಗಿದ್ದಾರೆ. ಎ1 ಶಾಸಕ ಮುನಿರತ್ನ, ಎ2 ಆಪ್ತ ಸಹಾಯಕ ವಿಜಯ್ ಕುಮರ್, ಎ3 ಸೆಕ್ಯೂರಿಟಿ ಅಭಿಷೇಕ್ ಮತ್ತು ಎ4 ವಸಂತ್ ಕುಮಾರ್ ಆಗಿದ್ದಾರೆ. ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದರು. ಜೊತೆಗೆ ತನಗೆ ರಕ್ಷಣ ನೀಡುವಂತೆ ಮನವಿ ಮಾಡಿದ್ದರು.

ಶಾಸಕ ಮುನಿರತ್ನ ಅವರು ಸೆಪ್ಟೆಂಬರ್​ 9 ರಂದು 20 ಲಕ್ಷ ಹಣ ಕೇಳಿದ್ದರು. ಹಣ ನೀಡಿದಿದ್ದರೆ ರೇಣುಕಾಸ್ವಾಮಿ ರೀತಿ ಕೊಲೆ ಮಾಡುವುದಾಗಿ ಮತ್ತು ಜಾತಿ ನಿಂದನೆ ಮಾಡಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು ಆರೋಪಿಸಿದ್ದರು. ಈ ಪ್ರಕರಣ ಸಂಬಂಧ ಮುನಿರತ್ನ ಅವರಿಗೆ ನೋಟಿಸ್ ನೀಡಲು ವೈಯಾಲಿಕಾವಲ್ ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.