ಮೈಸೂರು ದಸರಾ ಮಹೋತ್ಸವ :ಇಂದಿನಿಂದ ಗಜಪಡೆ ಕಾಡಿನಿಂದ ನಾಡಿಗೆ ಪಯಣ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಪ್ರಾರಂಭಗೊಂಡಿದೆ. ಇಂದಿನಿಂದ ದಸರಾ ಗಜಪಡೆ ಕಾಡಿನಿಂದ ನಾಡಿಗೆ ಪಯಣ ಆರಂಭಿಸಲಿವೆ. ಬೆಳಿಗ್ಗೆ 10:20 ರಿಂದ 10:45ರೊಳಗಿನ ಶುಭ ಮುಹೂರ್ತದಲ್ಲಿ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪಯಣ ಆರಂಭವಾಗಲಿದೆ.…

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಪ್ರಾರಂಭಗೊಂಡಿದೆ. ಇಂದಿನಿಂದ ದಸರಾ ಗಜಪಡೆ ಕಾಡಿನಿಂದ ನಾಡಿಗೆ ಪಯಣ ಆರಂಭಿಸಲಿವೆ.

ಬೆಳಿಗ್ಗೆ 10:20 ರಿಂದ 10:45ರೊಳಗಿನ ಶುಭ ಮುಹೂರ್ತದಲ್ಲಿ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪಯಣ ಆರಂಭವಾಗಲಿದೆ. ಮೊದಲ ತಂಡದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಮೈಸೂರಿಗೆ ಆಗಮಿಸಲಿವೆ.

ಎರಡನೇ ತಂಡದಲ್ಲಿ 5 ಆನೆಗಳು ಬರಲಿದೆ. ಹೆಚ್ಚುವರಿಯಾಗಿ 4 ಮೀಸಲು ಆನೆಗಳು ಗುರುತು ಕೂಡ ಮಾಡಲಾಗಿದೆ. ನಾಡಿಗೆ ಬರುವ ಈ ಗಜಪಡೆಗೆ ಆ.23 ರಂದು ಮೈಸೂರು ಅರಮನೆಯಲ್ಲಿ ಅದ್ಧೂರಿಯಿಂದ ಸ್ವಾಗತಿಸಲಾಗುತ್ತದೆ.

Vijayaprabha Mobile App free

ಕೊಡಗು ಜಿಲ್ಲೆ ದುಬಾರೆ ಸಾಕಾನೆ ಶಿಬಿರದಿಂದ ಕಂಜನ್, ಧನಂಜಯ, ಗೋಪಿ, ಅನೆಗಳು ಒಂದು ತಿಂಗಳ ಭರ್ಜರಿ ಪೂರ್ವಸಿದ್ಧತೆಯೊಂದಿಗೆ ನಾಳೆ ಮೈಸೂರಿನತ್ತ ಪ್ರಯಾಣ ಬೆಳೆಸಲಿವೆ.

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.