ಇಂದಿನಿಂದ ಪ್ರಧಾನಿ ಮೋದಿ ಅಮೆರಿಕ ಪ್ರವಾಸ, ಕ್ವಾಡ್ ಶೃಂಗಸಭೆಯಲ್ಲಿ ಭಾಗಿ

ಪ್ರಧಾನಿ ಮೋದಿ ಅವರು ಇಂದಿನಿಂದ (ಸೆ.21) ಅಮೆರಿಕ ಪ್ರವಾಸದಲ್ಲಿದ್ದಾರೆ. ಇಂದು ಅಮೆರಿಕಕ್ಕೆ ತೆರಳಿದ್ದು, ನಾಲ್ಕನೇ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಹಾಗೂ ಸೆಪ್ಟೆಂಬರ್ 23ರಂದು ನ್ಯೂಯಾರ್ಕ್​​​​ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ. ಅಮೆರಿಕದ…

ಪ್ರಧಾನಿ ಮೋದಿ ಅವರು ಇಂದಿನಿಂದ (ಸೆ.21) ಅಮೆರಿಕ ಪ್ರವಾಸದಲ್ಲಿದ್ದಾರೆ. ಇಂದು ಅಮೆರಿಕಕ್ಕೆ ತೆರಳಿದ್ದು, ನಾಲ್ಕನೇ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ಹಾಗೂ ಸೆಪ್ಟೆಂಬರ್ 23ರಂದು ನ್ಯೂಯಾರ್ಕ್​​​​ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರ ತವರೂರು ವಿಲ್ಮಿಂಗ್ಟನ್‌ನಲ್ಲಿ ಕ್ವಾಡ್ ಶೃಂಗಸಭೆ ಸಭೆಯನ್ನು ಆಯೋಜಿಸಲಾಗಿದೆ. ಕ್ವಾಡ್ ಶೃಂಗಸಭೆಯಲ್ಲಿ ನನ್ನ ಸ್ನೇಹಿತರಾದ ಅಧ್ಯಕ್ಷ ಬೈಡನ್, ಪ್ರಧಾನಿ ಅಲ್ಬನೀಸ್ ಮತ್ತು ಪ್ರಧಾನಿ ಕಿಶಿದಾ ಅವರನ್ನು ನಾನು ಎದುರು ನೋಡುತ್ತಿದ್ದಾನೆ ಎಂದು ಮೋದಿ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ಈ ವೇದಿಕೆಯು ಶಾಂತಿಯನ್ನು ಉತ್ತೇಜಿಸುವ ಸಮಾನ ಮನಸ್ಕ ರಾಷ್ಟ್ರಗಳ ವೇದಿಕೆಯಾಗಲಿದೆ. ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಪ್ರಗತಿ, ಮತ್ತು ಸಮೃದ್ಧಿ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಿದ್ದೇವೆ ಎಂದು ಹೇಳಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಜತೆ ಎರಡೂ ರಾಷ್ಟ್ರಗಳ ಮತ್ತು ಜಾಗತಿಕ ಹಿತಾಸಕ್ತಿಗಳ ಸುಧಾರಣೆಗಾಗಿ ಭಾರತ-ಯುಎಸ್ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ ಬಗ್ಗೆ ಚರ್ಚಿಸಲಿದ್ದೇವೆ ಎಂದು ಹೇಳಿದ್ದಾರೆ. ಈ ಕ್ವಾಡ್ ಶೃಂಗಸಭೆಯನ್ನು ಚತುರ್ಭುಜ ಭದ್ರತಾ ಸಂವಾದ ಎಂದು ಕರೆಯಲಾಗುತ್ತದೆ. ಭಾರತ, ಯುನೈಟೆಡ್ ಸ್ಟೇಟ್ಸ್, ಜಪಾನ್ ಮತ್ತು ಆಸ್ಟ್ರೇಲಿಯಾವನ್ನು ಒಳಗೊಂಡಿದೆ ಎಂದು ಹೇಳಲಾಗಿದೆ.

Vijayaprabha Mobile App free

ಪ್ರಧಾನಿ ಮೋದಿ ಅವರ ಈ ಭೇಟಿಯಲ್ಲಿ ಜಾಗತಿಕ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸುವ ನಿರೀಕ್ಷೆಯಿದೆ. ಭಾರತೀಯ ಡಯಾಸ್ಪೊರಾ ಮತ್ತು ಪ್ರಮುಖ ಅಮೆರಿಕನ್ ಉದ್ಯಮಿಗಳ ಜತೆಗೆ ಸಭೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ. ಕ್ವಾಡ್ ಶೃಂಗಸಭೆಯು ಉಕ್ರೇನ್ ಮತ್ತು ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷಗಳು, ಕಡಲ ಭದ್ರತೆ, ಉದಯೋನ್ಮುಖ ತಂತ್ರಜ್ಞಾನಗಳು ಮತ್ತು ಕ್ಯಾನ್ಸರ್ ವಿರುದ್ಧ ಹೋರಾಡುವ ವಿಚಾರಗಳು ಸೇರಿದಂತೆ ಹಲವಾರು ನಿರ್ಣಾಯಕ ವಿಷಯಗಳ ಮೇಲೆ ಕೇಂದ್ರೀಕರಿಸುತ್ತದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.