ಆಗಸ್ಟ್ ತಿಂಗಳಲ್ಲಿ ಯುದ್ಧ ಪೀಡಿತ ಉಕ್ರೇನ್‌ಗೆ ಪ್ರಧಾನಿ ಮೋದಿ ಭೇಟಿ

ನವದೆಹಲಿ: ರಷ್ಯಾ 2022ರಲ್ಲಿ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ (Russia-Ukraine War) ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್‌ನಲ್ಲಿ ಉಕ್ರೇನ್ ರಾಜಧಾನಿ ಕೀವ್​ಗೆ ಪ್ರಯಾಣಿಸಲಿದ್ದಾರೆ. ಇಟಲಿಯಲ್ಲಿ ಜೂನ್‌ನಲ್ಲಿ ನಡೆದ…

ನವದೆಹಲಿ: ರಷ್ಯಾ 2022ರಲ್ಲಿ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ (Russia-Ukraine War) ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್‌ನಲ್ಲಿ ಉಕ್ರೇನ್ ರಾಜಧಾನಿ ಕೀವ್​ಗೆ ಪ್ರಯಾಣಿಸಲಿದ್ದಾರೆ. ಇಟಲಿಯಲ್ಲಿ ಜೂನ್‌ನಲ್ಲಿ ನಡೆದ ಜಿ 7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ (Volodymyr Zelensky) ಭೇಟಿಯಾಗಿದ್ದರು. ಇದೀಗ ಎರಡು ತಿಂಗಳ ಅಂತರದಲ್ಲಿ ಈ ನಾಯಕರು ಮತ್ತೊಮ್ಮೆ ಭೇಟಿಯಾಗಲಿದ್ದಾರೆ.

ಮೋದಿ ಅವರು ಆಗಸ್ಟ್ 23ರಂದು ಉಕ್ರೇನ್‌ಗೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಮೋದಿ ಅವರು ಇತ್ತೀಚೆಗೆ ರಷ್ಯಾಕ್ಕೆ ಭೇಟಿ ನೀಡಿ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಮಾತಿಕತೆ ನಡೆಸಿದ್ದರು. ಅದಾಗಿ ಕೆಲವೇ ದಿನಗಳಲ್ಲಿ ಉಕ್ರೇನ್‌ ಪ್ರವಾಸ ಕೈಗೊಂಡಿರುವುದು ಕುತೂಹಲ ಮೂಡಿಸಿದೆ.

ಲೋಕಸಭಾ ಚುನಾವಣೆಯ ನಂತರ ಮೋದಿ ಮೂರನೇ ಅವಧಿಗೆ ಪ್ರದಾನಿಯಾಗಿ ಆಯ್ಕೆಯಾದ ದಿನದಂದು ಝೆಲೆನ್ಸ್ಕಿ ಕರೆ ಮಾಡಿ ಅಭಿನಂದಿಸಿದ್ದರು ಮತ್ತು ಯುದ್ಧ ಪೀಡಿತ ದೇಶಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದರು. ಅದಕ್ಕೂ ಮೊದಲು ಮಾರ್ಚ್‌ನಲ್ಲಿ ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗಿನ ದೂರವಾಣಿ ಮೂಲಕ ಮಾತನಾಡಿದ್ದ ಮೋದಿ ಅವರು ಭಾರತ-ಉಕ್ರೇನ್ ಸಂಬಂಧಬನ್ನು ಇನ್ನಷ್ಟು ಬಲಪಡಿಸುವ ಮಾರ್ಗಗಳ ಬಗ್ಗೆ ಚರ್ಚೆ ನಡೆಸಿದ್ದರು. ರಷ್ಯಾ-ಉಕ್ರೇನ್‌ ಸಂಘರ್ಷದ ಪರಿಹಾರಕ್ಕಾಗಿ ಮಾತುಕತೆ ನಡೆಸುವಂತೆ ಕರೆ ನೀಡಿದ್ದರು.

Vijayaprabha Mobile App free

ಎರಡು ಯುದ್ಧ ನಿಲ್ಲಿಸಲು ಭಾರತವು ತನ್ನ ಶಕ್ತಿಮೀರಿ ಕೆಲಸ ಮಾಡುವುದನ್ನು ಮುಂದುವರಿಸಲಿದೆ ಎಂದು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ. ಅದಕ್ಕೆ ಪೂರಕವಾಗಿ ಯುದ್ಧ ಪ್ರಾರಂಭವಾದಾಗಿನಿಂದ ಭಾರತವು ಇದನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಮಾತ್ರ ಪರಿಹರಿಸಬಹುದು ಎಂದು ತಿಳಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.