ಮುಂಬೈ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಾರ್ಟಿಯ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರನ್ನು ಮುಂಬೈನ ಬಾಂದ್ರಾ ಪ್ರದೇಶದಲ್ಲಿ ಮೂವರು ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ.
ಮಹಾರಾಷ್ಟ್ರದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯುವ ನಿರೀಕ್ಷೆ ಇದೆ. ಈ ನಡುವೆ ಮಾಜಿ ಕಾಂಗ್ರೆಸ್ಸಿಗ ಸಿದ್ದಿಕ್ (66) ಅವರನ್ನು ಕೊಲೆಗೈದಿರುವುದು ರಾಜ್ಯದೆಲ್ಲೆಡೆ ಆತಂಕ ಸೃಷ್ಟಿ ಕಾಡಿದೆ.
ರಕ್ತದ ಮಡುವಿನಲ್ಲಿದ್ದ ಸಿದ್ದಿಕ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.