ವಾಲ್ಮೀಕಿ ನಿಗಮ ಅಕ್ರಮ, ಮುಡಾ ಹಗರಣ ಪ್ರಕರಣ: ಸಂಸತ್ ಬಳಿ ರಾಜ್ಯ ಬಿಜೆಪಿ ಸಂಸದರ ಪ್ರತಿಭಟನೆ

ನವ ದೆಹಲಿ: ವಾಲ್ಮೀಕಿ ನಿಗಮ ಅಕ್ರಮ ಮತ್ತು ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಸಂಸತ್ ಆವರಣದಲ್ಲಿ ರಾಜ್ಯದ ಬಿಜೆಪಿ ಸಂಸದರು ಶುಕ್ರವಾರ ಪ್ರತಿಭಟನೆ (BJP Protest)…

ನವ ದೆಹಲಿ: ವಾಲ್ಮೀಕಿ ನಿಗಮ ಅಕ್ರಮ ಮತ್ತು ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಸಂಸತ್ ಆವರಣದಲ್ಲಿ ರಾಜ್ಯದ ಬಿಜೆಪಿ ಸಂಸದರು ಶುಕ್ರವಾರ ಪ್ರತಿಭಟನೆ (BJP Protest) ನಡೆಸಿದರು.

ನೂತನ ಸಂಸತ್ ಭವನದ ಮಕರ ದ್ವಾರದ ಬಳಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರಾದ ಬಸವರಾಜ್ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, ಪಿ.ಸಿ. ಮೋಹನ್, ಬಿ.ವೈ ರಾಘವೇಂದ್ರ, ವಿಶ್ವೇಶ್ವರ ಹೆಗಡೆ ಕಾಗೇರಿ, ಯಧುವೀರ್ ಒಡೆಯರ್, ಡಾ. ಮಂಜುನಾಥ್, ಕ್ಯಾ. ಬ್ರಿಜೇಶ್ ಚೌಟಾ, ರಮೇಶ್ ಜಿಗಜಿಣಗಿ, ಪಿಸಿ ಗದ್ದಿಗೌಡರ್, ಜೆಡಿಎಸ್‌ ಸಂಸದ ಮಲ್ಲೇಶ್ ಬಾಬು, ರಾಜ್ಯಸಭಾ ಸದಸ್ಯರಾದ ಜಗ್ಗೇಶ್, ಈರಣ್ಣ ಕಡಾಡಿ, ನಾರಾಯಣ ಸಾ ಭಾಂಡಗೆ, ಲೆಹರ್ ಸಿಂಗ್ ಸೇರಿ ಹಲವರು ಭಾಗಿಯಾಗಿದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.