ನವದೆಹಲಿ: ಸುಂಕ, ಕೃಷಿ, ಕಾನೂನು, ರೇಡಿಯೋ ಮತ್ತು ದೂರದರ್ಶನ ಪ್ರಸಾರ, ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಗಾಢವಾಗಿಸಲು ಮತ್ತು ಸಹಕಾರವನ್ನು ಹೆಚ್ಚಿಸಲು ಭಾರತ ಹಾಗೂ ವಿಯೆಟ್ನಾಂ ಒಂಬತ್ತು ಒಪ್ಪಂದಗಳಿಗೆ ಸಹಿ ಹಾಕಿವೆ.
ಆರ್ಥಿಕ, ಕಾರ್ಯತಂತ್ರ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಹೆಚ್ಚಿಸುವ ಮೂಲಕ ಭಾರತ-ವಿಯೆಟ್ನಾಂ ಸಂಬಂಧವನ್ನು ಇನ್ನಷ್ಟು ಗಾಢಗೊಳಿಸಲು ಉಭಯ ರಾಷ್ಟ್ರಗಳ ನಾಯಕರು ಸಹಮತ ವ್ಯಕ್ತಪಡಿಸಿದ್ದಾರೆ.
ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಜೈದೀಪ್ ಮಜುಂದಾರ್, ಪ್ರಧಾನಿ ನರೇಂದ್ರ ಮೋದಿ ಅವರು ವಿಯೆಟ್ನಾಂ ಪ್ರಧಾನಿ ಫಾಮ್ ಮಿನ್ ಚಿನ್ಹ್ ಅವರೊಂದಿಗೆ ದೆಹಲಿಯಲ್ಲಿ ಮಾತುಕತೆ ನಡೆಸಿದರು. ವಿಯೆಟ್ನಾಂ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ ಮತ್ತು ಭಾರತ-ವಿಯೆಟ್ನಾಂ ದ್ವಿಪಕ್ಷೀಯ ವ್ಯಾಪಾರವು 15 ಬಿಲಿಯನ್ ಯುಎಸ್ ಡಾಲರ್‌ಗಳನ್ನು ತಲುಪಿದೆ ಎಂದು ಹೇಳಿದರು. ಎರಡೂ ದೇಶಗಳು ದ್ವಿಪಕ್ಷೀಯ ವ್ಯಾಪಾರವನ್ನು ಹೆಚ್ಚಿಸಲು ಒತ್ತು ನೀಡಿವೆ. 2024-2028ರ ಅವಧಿಯಲ್ಲಿ ಸಮಗ್ರ ಕಾರ್ಯತಂತ್ರದ ಸಹಭಾಗಿತ್ವದ ಅನುಷ್ಠಾನಕ್ಕಾಗಿ ಎರಡೂ ದೇಶಗಳು ಕ್ರಿಯಾ ಯೋಜನೆಗೆ ಒಪ್ಪಿಕೊಂಡಿವೆ ಎಂದು ತಿಳಿಸಿದರು