New ration card: ಹೊಸ ರೇಷನ್‌ ಕಾರ್ಡ್‌ಗೆ ಇಂದೇ ಅರ್ಜಿ ಸಲ್ಲಿಸಿ.. ತಿದ್ದುಪಡಿಗೂ ಇದೆ ಅವಕಾಶ

New Ration Card vijayaprabha news New Ration Card vijayaprabha news

New ration card: ಹೊಸ APL, BPL ಕಾರ್ಡ್‌ಗೆ ಅರ್ಜಿ ಸಲ್ಲಿಸುವ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಇಂದು ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.

ಈ ಬಗ್ಗೆ ಆಹಾರ & ನಾಗರಿಕ ಸರಬರಾಜು ಇಲಾಖೆ ಮಾಹಿತಿ ಹಂಚಿಕೊಂಡಿದ್ದು, ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಬೆಳಗ್ಗೆ 10 ರಿಂದ 12 ಗಂಟೆಯವರೆಗೆ..ಹಾಗೆಯೇ ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಸಂಜೆ 4 ರಿಂದ 6 ಗಂಟೆಯವರೆಗೆ ಸಮಯಾವಕಾಶ ನೀಡಲಾಗಿದೆ. ಈ ಅವಕಾಶವನ್ನು ಬಳಸಿಕೊಳ್ಳುವಂತೆ ಇಲಾಖೆ ಮನವಿ ಮಾಡಿದೆ.

ಇದನ್ನು ಓದಿ: ಹತ್ರಾಸ್‌ ಕಾಲ್ತುಳಿತಕ್ಕೆ 116 ಮಂದಿ ಸಾವು- ಹಲವರಿಗೆ ಗಾಯ : ದೂರು ದಾಖಲು

Advertisement

80 ಕೋಟಿ ಪಡಿತರದಾರರಿಗೆ ಗುಡ್‌ನ್ಯೂಸ್‌!

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು, ಗ್ರಾಹಕರ ಪಡಿತರ ಚೀಟಿಗಳ ಜೊತೆ ಆಧಾರ್‌ ಕಾರ್ಡ್‌ ಜೋಡಣೆ ದಿನಾಂಕವನ್ನು ಸೆಪ್ಟೆಂಬರ್‌ 30, 2024 ರವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿದೆ.

ಅನೇಕ ಫಲಾನುಭವಿಗಳು ತಮ್ಮ ಕುಟುಂಬದ ಸದಸ್ಯರ ಆಧಾರ್‌ ಜೋಡಣೆ ಮಾಡಿಲ್ಲ. ಹೀಗೆ ಮಾಡಲು ವಿಫಲವಾದರೆ ಪಡಿತರ ಚೀಟಿಯಿಂದ ಅವರ ಹೆಸರನ್ನು ತೆಗೆದುಹಾಕಲಾಗುತ್ತದೆ. ಇನ್ನು ಈ ಕೆಲಸ ಮಾಡದವರಿಗಾಗಿ ಅನುಕೂಲವಾಗುವ ನಿಟ್ಟಿನಲ್ಲಿ ದಿನಾಂಕವನ್ನು ವಿಸ್ತರಿಸಿದೆ. ಇದನ್ನು ಮೊದಲು ಜೂನ್‌ 30ಕ್ಕೆ ನಿಗದಿಪಡಿಸಲಾಗಿತ್ತು.

ಇದನ್ನು ಓದಿ: ಜುಲೈ 9ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement