ಬೆಂಗಳೂರು: ಮುಡಾ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಅನುಮತಿ ಕೊಡಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ನಿರ್ಧಾರ ಮಾಡಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದಯಾತ್ರೆಗೆ ಅನುಮತಿ ನೀಡಲು ಸರ್ಕಾರ ನಿರ್ಧರಿಸಿದೆ. ಶಾಂತಿಯುತವಾಗಿ ಪಾದಯಾತ್ರೆ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ. ಈ ಹಿನ್ನೆಲೆ ಪಾದಯಾತ್ರೆಗೆ ಅನುಮತಿ ನೀಡಲು ನಿರ್ಧಾರ ಮಾಡಿದ್ದೇವೆ ಎಂದು ಹೇಳಿದರು.
ಇನ್ನು ಈ ಹಿಂದೆ ಪಾದಯಾತ್ರೆಗೆ ನಾವು ಅನುಮತಿ ನೀಡುವುದಿಲ್ಲ. ಅವರು ಮಾಡುವುದಿದ್ದರೆ ಮಾಡಿಕೊಳ್ಳಲಿ, ಅದರ ಬಗ್ಗೆ ನಮ್ಮ ತಕರಾರಿಲ್ಲ. ಆದರೆ, ಅಧಿಕೃತವಾಗಿ ಪೊಲೀಸ್ ಇಲಾಖೆಯಿಂದ ನಾವು ಅನುಮತಿ ನೀಡುವುದಿಲ್ಲ ಎಂದು ಪರಮೇಶ್ವರ್ ಹೇಳಿಕೆ ನೀಡಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment