ಭಾರತಕ್ಕೆ ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಆಘಾತ: ಕುಸ್ತಿ ಫೈನಲ್‌ನಿಂದ ವಿನೇಶ್ ಫೋಗಟ್ ಅನರ್ಹ

ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಕುಸ್ತಿ ಫೈನಲ್ ಸ್ಪರ್ಧೆಯಿಂದ ವಿನೇಶ್ ಫೋಗಟ್ ಅನರ್ಹಗೊಂಡಿದ್ದು, ಭಾರತಕ್ಕೆ ದೊಡ್ಡ ಆಘಾತ ಎದುರಾಗಿದೆ. ಈ ಮೂಲಕ ವಿನೇಶ್ ಫೋಗಟ್ ಅವರಿಗೆ ಒಲಿಂಪಿಕ್ಸ್​ನ ಚೊಚ್ಚಲ ಪದಕ ಕೈ ತಪ್ಪಿದೆ. ಮಹಿಳೆಯರ…

ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಕುಸ್ತಿ ಫೈನಲ್ ಸ್ಪರ್ಧೆಯಿಂದ ವಿನೇಶ್ ಫೋಗಟ್ ಅನರ್ಹಗೊಂಡಿದ್ದು, ಭಾರತಕ್ಕೆ ದೊಡ್ಡ ಆಘಾತ ಎದುರಾಗಿದೆ. ಈ ಮೂಲಕ ವಿನೇಶ್ ಫೋಗಟ್ ಅವರಿಗೆ ಒಲಿಂಪಿಕ್ಸ್​ನ ಚೊಚ್ಚಲ ಪದಕ ಕೈ ತಪ್ಪಿದೆ.

ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಸೋಲಿಸಿ ವಿನೇಶ್ ಫೋಗಟ್ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಫೈನಲ್ ತಲುಪಿದ್ದರು. ಆದರೆ ವಿನೇಶ್ ಫೋಗಟ್ ಅವರು ಹೆಚ್ಚಿನ ತೂಕ ಹೊಂದಿದ ಹಿನ್ನೆಲೆ ಫೈನಲ್‌ನಿಂದ ಅನರ್ಹಗೊಂಡಿದ್ದಾರೆ.

ವಿನೇಶ್ ಫೋಗಟ್ ಅವರು 50 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದು, ಇದರಲ್ಲಿ 100 ಗ್ರಾಂ ಹೆಚ್ಚು ತೂಕ ಹೊಂದಲು ಅವಕಾಶವಿದೆ. ಫೈನಲ್ ಪಂದ್ಯಕ್ಕೂ ಮುನ್ನ ನಡೆದ ತೂಕ ಪರೀಕ್ಷೆಯಲ್ಲಿ ವಿನೇಶ್ ಫೋಗಟ್ ಅವರ ತೂಕವು ನಿಗದಿತ ಮಿತಿಗಿಂತ ಹೆಚ್ಚಾಗಿರುವುದು ಕಂಡುಬಂದಿದೆ. ಆದರೆ ವಿನೇಶ್ ಅವರ ದೇಹದ ತೂಕ 150 ಗ್ರಾಂ ಹೆಚ್ಚಿದೆ. ಹೀಗಾಗಿ ಅವರು ಫೈನಲ್ ಸ್ಪರ್ಧೆಯಿಂದ ಅನರ್ಹಗೊಂಡಿರುವುದಾಗಿ ವರದಿಯಾಗಿದೆ.

Vijayaprabha Mobile App free

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.