ತಿರುಪತಿ ಲಡ್ಡು ವಿವಾದ: ತಿಮ್ಮಪ್ಪನ ಕ್ಷಮೆ ಕೋರಿ 11 ದಿನಗಳ ಉಪವಾಸ ಕೈಗೊಂಡ ಪವನ್ ಕಲ್ಯಾಣ್

ವಿಜಯವಾಡ: ತಿರುಪತಿ ತಿರುಮಲ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡಿದ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಇದೆ ಎಂಬುದು ದೃಢವಾಗಿರುವುದು ವರದಿಗಳಿಂದ ತಿಳಿದುಬಂದಿದೆ. ಈ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಕ್ಷಮೆ ಕೋರಿ ಆಂಧ್ರಪ್ರದೇಶ ಡಿಸಿಎಂ…

ವಿಜಯವಾಡ: ತಿರುಪತಿ ತಿರುಮಲ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡಿದ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಇದೆ ಎಂಬುದು ದೃಢವಾಗಿರುವುದು ವರದಿಗಳಿಂದ ತಿಳಿದುಬಂದಿದೆ.

ಈ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಕ್ಷಮೆ ಕೋರಿ ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಇಂದಿನಿಂದ (ಸೆ.22) 11 ದಿನದ ಪ್ರಾಯಶ್ಚಿತ ದೀಕ್ಷೆ ಕೈಗೊಳ್ಳಲಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪವನ್ ಕಲ್ಯಾಣ್ ಪ್ರತಿಕ್ರಿಯಿಸಿ, ತಿರುಪತಿ ಲಡ್ಡು ಅಂದರೆ ಅಮೃತಕ್ಕೆ ಸಮನಾಗಿ ನೋಡುತ್ತೇವೆ. ತಿರುಮಲ ಲಡ್ಡು ಪ್ರಸಾದ ಅಶುದ್ಧವಾಗಿದೆ. ಈ ಪಾಪವನ್ನು ಆರಂಭದಲ್ಲೇ ಪತ್ತೆ ಹಚ್ಚಲು ಸಾಧ್ಯವಾಗದಿರುವುದು ಹಿಂದೂ ಜನಾಂಗಕ್ಕೆ ಕಳಂಕ. ಲಡ್ಡು ಪ್ರಸಾದದಲ್ಲಿ ಪ್ರಾಣಿ ಕೊಬ್ಬು ಬೆರಸಿರುವುದು ಗೊತ್ತಾದ ಕ್ಷಣವೇ ಬೆಚ್ಚಿಬಿದ್ದೆ. ತಪ್ಪಿತಸ್ಥ ಎಂಬ ಭಾವನೆ, ಜನರ ಹಿತಕ್ಕಾಗಿ ಹೋರಾಟ ನಡೆಸುತ್ತಿರುವ ನನಗೆ ಆರಂಭದಲ್ಲಿ ಇಂತಹ ತೊಂದರೆಗಳು ಗಮನಕ್ಕೆ ಬಾರದಿರುವುದು ನೋವು ತಂದಿದೆ. ಸನಾತನ ಧರ್ಮವನ್ನು ನಂಬಿ ಆಚರಿಸುವ ಎಲ್ಲರೂ ಇದಕ್ಕೆ ತಕ್ಕ ಪ್ರಾಯಶ್ಚಿತ್ತವನ್ನು ಮಾಡಿಕೊಳ್ಳಬೇಕು ಎಂದಿದ್ದಾರೆ.

Vijayaprabha Mobile App free

ಅದರ ಭಾಗವಾಗಿ ನಾನು ಪ್ರಾಯಶ್ಚಿತ್ತ ದೀಕ್ಷೆಯನ್ನು ಮಾಡುವ ಸಂಕಲ್ಪವನ್ನು ಕೈಗೊಂಡಿದ್ದೇನೆ. 22 ಸೆಪ್ಟೆಂಬರ್ 2024ರಂದು ಅಂದರೆ ಭಾನುವಾರದ ಬೆಳಗ್ಗೆ ಗುಂಟೂರು ಜಿಲ್ಲೆಯ ನಂಬೂರಿನಲ್ಲಿ ದಶಾವತಾರ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದೀಕ್ಷೆಯನ್ನು ಕೈಗೊಳ್ಳುತ್ತಿದ್ದೇನೆ. ಅಂದಿನಿಂದ 11 ದಿನಗಳ ಕಾಲವು ದೀಕ್ಷೆಯನ್ನು ಮಾಡುತ್ತೇನೆ. ಬಳಿಕ ತಿರುಮಲಕ್ಕೆ ಭೇಟಿ ನೀಡುತ್ತೇನೆ ಎಂದು ತಿಳಿಸಿದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.