ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿ ಪವಿತ್ರಾಗೌಡ, A2 ಆರೋಪಿ ನಟ ದರ್ಶನ್ ಸೇರಿ 17 ಆರೋಪಿಗಳು ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ.
ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಒಂದು ಎಲ್ಲೆಡೆ ಸುದ್ದಿಯಾಗುತ್ತಿದೆ.ರೇಣುಕಾಸ್ವಾಮಿ ಪವಿತ್ರ ಗೌಡಗೆ ಅಶ್ಲೀಲ ಫೋಟೋ, ಮೆಸೇಜ್ ಕಳುಹಿಸಿರುವುದು ಸತ್ಯ ಎಂದು ಇನ್ಸ್ಟಾಗ್ರಾಂ ಸಂಸ್ಥೆ ಪೊಲೀಸರಿಗೆ ಮಾಹಿತಿ ನೀಡಿದೆ ಎಂದು ತಿಳಿದುಬಂದಿದೆ. ಇದೀಗ ಪೊಲೀಸರು 4500 ಪುಟಗಳನ್ನೊಳಗೊಂಡ ಚಾರ್ಜ್‌ಶೀಟ್ ಸಲ್ಲಿಕೆಗೆ ಸಿದ್ಧತೆ ಮಾಡಿಕೊಂಡಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟಿ ಪವಿತ್ರಾ ಗೌಡ A1 ಆಗಿದ್ದು, ದರ್ಶನ್ A2 ಆರೋಪಿ ಆಗಿದ್ದಾರೆ.
ಇದೀಗ ನಟ ದರ್ಶನ್ ವಿರುದ್ಧವೇ ಹಲವು ಸಾಕ್ಷಿಗಳು ಸಿಕ್ಕಿವೆ ಎನ್ನಲಾಗಿದ್ದು, ಡಿ ಬಾಸ್ A1 ಆರೋಪಿ ಆಗುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸೆ. 09 ಕ್ಕೆ 90 ತುಂಬಲಿದ್ದು, ನ್ಯಾಯಾಂಗದ ಪ್ರಕಾರ 90 ದಿನದ ಒಳಗಾಗಿ ಕೋರ್ಟ್ ಗೆ ಚಾರ್ಜ್‌ಶೀಟ್ ಸಲ್ಲಿಸಬೇಕು. ಹೀಗಾಗಿ ಬೆಂಗಳೂರು ಪೊಲೀಸರು ಇಂದೇ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗುತಿದೆ.