ದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ (Crude Oil Prices) ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ (India) ಬೆಲೆ ಇಳಿಕೆಯಾಗುವ ಸಾಧ್ಯತೆಯಿದೆ.
ಕಚ್ಚಾ ತೈಲ ಬೆಲೆ ಒಂಬತ್ತು ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿರುವ ಕಾರಣ ಇಂಧನ ಬೆಲೆಯನ್ನು ಕಡಿತಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಸರ್ಕಾರದ ಉನ್ನತ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ. ಕಚ್ಚಾ ತೈಲ ಬೆಲೆಗಳು ಜನವರಿ 2024 ರಿಂದ ಕಡಿಮೆ ಮಟ್ಟಕ್ಕೆ ಕುಸಿದಿವೆ. ತೈಲ ಬೆಲೆ ಇಳಿಕೆಯಿಂದ ಸರ್ಕಾರಿ ಸ್ವಾಮ್ಯದ ಕಂಪನಿಗಳಿಗೆ ಲಾಭವಾಗುತ್ತಿರುವ ಕಾರಣ ಬೆಲೆ ಇಳಿಕೆಯಾಗಬಹುದು ಎಂದು ಹೇಳಲಾಗುತ್ತಿದೆ. ಅಮೆರಿಕದಲ್ಲಿ (USA) ಆರ್ಥಿಕ ಹಿಂಜರಿತದ (Recession Fear) ಭಯದ ನಡುವೆ ಬ್ರೆಂಟ್ ಕಚ್ಚಾ ತೈಲವು ಕುಸಿಯುತ್ತಿದೆ. ಶುಕ್ರವಾರ ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 73.17 ಡಾಲರ್ (6,143 ರೂ.) ವೆಸ್ಟ್ ಟೆಕ್ಸಸ್ ಇಂಟರ್‌ಮೀಡಿಯೆಟ್ (WTI) ದರ 69.63 ಡಾಲರ್ (5,847 ರೂ.) ವ್ಯವಹಾರ ನಡೆಸಿತ್ತು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment