ಮಡಿಕೇರಿ: ತಲಕಾವೇರಿಯಲ್ಲಿ ಅಕ್ಟೋಬರ್ 17ರಂದು ಬೆಳಗ್ಗೆ 7.40ಕ್ಕೆ ನಡೆಯಲಿರುವ ಶ್ರೀಕಾವೇರಿ ತುಲಾಸಂಕ್ರಮಣ ಪವಿತ್ರ ತೀರ್ಥೋದ್ಭವದಲ್ಲಿ ಕಲ್ಯಾಣಿ ಮತ್ತು ಪವಿತ್ರ ಬ್ರಹ್ಮಕುಂಡಿಕೆ ಬಳಿ ಪ್ಲಾಸ್ಟಿಕ್ ಬಾಟಲಿ, ಬಿಂದಿಗೆ ಮತ್ತು ಕ್ಯಾನ್‌ಗಳ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ.
ʼತೀರ್ಥೋದ್ಭವವಾಯಿತುʼ ಎಂದು ಅರ್ಚಕರು ಘೋಷಿಸುತ್ತಿದ್ದಂತೆ ಸಾಮಾನ್ಯವಾಗಿ ಕಲ್ಯಾಣಿಗೆ ಪ್ಲಾಸ್ಟಿಕ್ ಬಿಂದಿಗೆ, ಕ್ಯಾನ್, ಬಾಟಲಿಗಳನ್ನು ಹಿಡಿದು ಧುಮುಕುವ ಭಕ್ತರು ಬ್ರಹ್ಮಕುಂಡಿಕೆ ಬಳಿ ತೀರ್ಥವನ್ನು ಅದರಲ್ಲೇ ತುಂಬಿಸಿಕೊಳ್ಳುತ್ತಾರೆ. ಹಾಗಾಗಿ ತೀರ್ಥ ತುಂಬಿಸಿಕೊಳ್ಳಲು ಪ್ಲಾಸ್ಟಿಕ್ ಪರಿಕರಗಳನ್ನು ನಿಷೇಧಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.