(PM Awas Yojana Application) ಪ್ರಧಾನ ಮಂತ್ರಿ ಜಾರಿಗೆ ತಂದಿರುವಂತ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತವಾಗಿ ಮನೆ ಪಡೆದುಕೊಳ್ಳಬಹುದು. ಹಾಗಾದರೆ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುತ್ತಿದ್ದು ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ನಿಮಗೆ ಮನೆ ಕಟ್ಟಿಸಿಕೊಳ್ಳಲು 1,50,000 ರೂಪಾಯಿ ಹಣ ನೀಡಲಾಗುತ್ತದೆ. ಹಾಗೂ ಮನೆ ಕಟ್ಟಿಸಿಕೊಳ್ಳಲು ಹೆಚ್ಚಿನ ಹಣ ಬೇಕಾದಲ್ಲಿ ಈ ಯೋಜನೆ ಮೂಲಕ ಸಬ್ಸಿಡಿ ದರದಲ್ಲಿ ಆರು ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಒದಗಿಸಿಕೊಡಲಾಗುತ್ತದೆ
ನಗರ ಪ್ರದೇಶಗಳಲ್ಲಿ ವಾಸ ಮಾಡುತ್ತಿದ್ದರೆ, ಈ ಯೋಜನೆ ಅಡಿಯಲ್ಲಿ ಮನೆ ಕಟ್ಟಿಸಿಕೊಳ್ಳಲು 1,70,000 ರೂಪಾಯಿ ಹಣ ಸಿಗುತ್ತದೆ. ಹಾಗೂ ಹೆಚ್ಚಿನ ಹಣಕ್ಕಾಗಿ ಈ ಯೋಜನೆ ಅಡಿಯಲ್ಲಿ 600000 ವರೆಗೆ ಕಡಿಮೆ ಬಡ್ಡಿ ದರದ ವರೆಗೆ ಸಾಲ ಸಿಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಯಾವುದು?:
* ಆಧಾರ್ ಕಾರ್ಡ್
* ಬ್ಯಾಂಕ್ ಪಾಸ್ ಬುಕ್
* ರೇಷನ್ ಕಾರ್ಡ್
* ಮೊಬೈಲ್ ನಂಬರ್
* ಜಾತಿ ಪ್ರಮಾಣ ಪತ್ರ
* ಆದಾಯ ಪ್ರಮಾಣ ಪತ್ರ
* ಇತ್ತೀಚಿನ ಫೋಟೋ
ಎಲ್ಲಿ ಅರ್ಜಿ ಸಲ್ಲಿಸಬೇಕು?:
ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಅಥವಾ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.